ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

Date:

Advertisements

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನಿಸಿದಾಗ, “ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ” ಎಂದು ಮರು ಪ್ರಶ್ನಿಸಿದರು.

ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಅಪರಾಧ

Advertisements

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲ” ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ

ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ” ಎಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

“ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವೆ” ಎಂದು ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X