ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

Date:

Advertisements
  • ‘ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು’
  • ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ: ಸಚಿವ ಚಲುವರಾಯಸ್ವಾಮಿ

ವಿಶ್ವ ಬ್ಯಾಂಕಿನ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ್ದು, ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಮತ್ತು ಸರ್ಕಾರದ ಉನ್ನತ ಅಧಿಕಾರಿಗಳ ಜತೆ ನಿಯೋಗ ಸಭೆ ನಡೆಸಿದೆ.

ಈ ಭೇಟಿಯ ಭಾಗವಾಗಿ, ವಿಶ್ವಬ್ಯಾಂಕ್ ತಂಡ ಪ್ರಸ್ತುತ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ವಿಶ್ವಬ್ಯಾಂಕ್ ಅನುದಾನಿತ ರಿವಾರ್ಡ್ ಯೋಜನೆ ಮತ್ತು ರಾಜ್ಯದಲ್ಲಿ ಜಲಾನಯನ ಅಭಿವೃದ್ಧಿಗಾಗಿ ಪರಸ್ಪರ ಸಹಯೋಗವನ್ನು ಮುಂದುವರೆಸುವ ಕುರಿತು ಚರ್ಚಿಸಲಾಯಿತು.

ಸಿರಿ ಧಾನ್ಯ ಬೆಳೆಗಳ ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ಹಾಗೂ ರಫ್ತು, ರಾಜ್ಯದ ವಿವಿಧ ವಲಯಗಳ ಕೃಷಿ ಮೂಲ ಸೌಕರ್ಯಗಳ ಅಭಿವೃದ್ಧಿ, ದೀರ್ಘಾವಧಿ ಉಪಚಾರಗಳಿಂದ ಮಣ್ಣಿನ ಸಾವಯವ ಇಂಗಾಲದ ಮರುಸ್ಥಾಪನೆ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರಗಳಿಗೆ ವಿಧಾನ ಬಳಸಿ ಕ್ರಿಯಾತ್ಮಕ ಕೃಷಿ ಅಭಿವೃದ್ಧಿ, ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಗ್ರಾಮೀಣ ಮಾರುಕಟ್ಟೆಗಳನ್ನು ಸ್ಥಾಪಿಸುವುದು ಹಾಗೂ ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ ಜಾಗತಿಕ ಮಾರುಕಟ್ಟೆಗೆ ಸಮೀಕರಿಸುವ ಬಗ್ಗೆ ಕೃಷಿ ಸಚಿವರು ವಿಶ್ವಬ್ಯಾಂಕ್ ತಂಡದ ಚರ್ಚಿಸಿದರು.

Advertisements

ವಿಶ್ವಬ್ಯಾಂಕ್ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ಮಾತನಾಡಿ, “ವೈಜ್ಞಾನಿಕವಾದ ಭೂ ಮತ್ತು ಜಲ ಸಂಪನ್ಮೂಲಗಳ ದತ್ತಾಂಶ ಹಾಗೂ ಡಿಜಿಟಲ್ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ರಾಜ್ಯದ ಉಪಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಕರ್ನಾಟಕದ ಮಾದರಿಯನ್ನು ದೇಶದ ಇತರೆ ಭಾಗಗಳಲ್ಲಿಯೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ರಾಜ್ಯವೂ ಸಹ ಕೃಷಿ ಕ್ಷೇತ್ರದಲ್ಲಿ ಇತರ ದೇಶಗಳ ಉತ್ತಮ ತಾಂತ್ರಿಕತೆ / ಮಾದರಿಗಳನ್ನು ಅಳವಡಿಸಿಕೊಂಡು ಪ್ರಗತಿಯನ್ನು ಸಾಧಿಸಬಹುದಾಗಿದೆ” ಎಂದು ತಿಳಿಸಿದರು.

600 ಕೋಟಿಯ ನೆರವು

“ರಾಜ್ಯದಲ್ಲಿ ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು ನೀಡಲು ವಿಶ್ವಬ್ಯಾಂಕ್ ಈಗಾಗಲೇ ಸಮ್ಮತಿಸಿದೆ. ಐದು ವರ್ಷಗಳ ‘ರಿವಾರ್ಡ್’ (ಜಲಾನಯನ ಪ್ರದೇಶ ಅಭಿವೃದ್ಧಿ ಯೋಜನೆ) ಮೂಲಕ ಜಲಾನಯನ ಪ್ರದೇಶವನ್ನು ಅಭಿವೃದ್ಧಿಗೊಳಿಸಲಾಗುವುದು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X