ಎಲ್ಲ ಬೆಲೆಗಳ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

Date:

Advertisements
  • ‘ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಸರ್ಕಾರದ ನಡೆ ಮಾರಕ’
  • ‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ ಕೇವಲ 23 ಸಾವಿರ ಕೋಟಿ ರೂ.’

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ಚೀಟ್ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೋಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ” ಎಂದಿದ್ದಾರೆ.

ದಲಿತರಿಗೆ ದ್ರೋಹ

Advertisements

“ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ದಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

“ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದೆ. ಇದು ಈ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹ” ಎಂದು ಬೊಮ್ಮಾಯಿ ಟೀಕಿಸಿದ್ದಾರೆ‌.

“ಸಮಾಜ ಕಲ್ಯಾಣ ಸಚಿವ ಡಾ.‌ಎಚ್ ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್‌ಗೆ ಇರುವ ನಿರ್ಲಕ್ಷ್ಯ ಧೋರಣೆ ಎತ್ತಿ ತೋರಿಸುತ್ತದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X