ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಗದಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಕರ್ನಾಟಕ ಸಂಭ್ರಮ-50’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ನಾಮಕರಣ ಆಗಲು ಶ್ರಮಿಸಿ, ಹೋರಾಟ ನಡೆಸಿದ್ದ ಕೆ.ಹೆಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

Advertisements

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಇದೇ ವೇಳೆ ಸಿಎಂ ಉದಾಹರಿಸಿದರು.

WhatsApp Image 2023 11 03 at 3.51.15 PM

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡೀ ನಾಡಿನಲ್ಲಿ ಪಸರಿಸುತ್ತದೆ ಎಂದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಅವಳಿ ನಗರಕ್ಕೆ 61 ಕೋಟಿ
ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X