‘ಓವರ್‌ ಸ್ಮಾರ್ಟ್’ ವಿಚಾರಕ್ಕೆ ಬಿಜೆಪಿ ಸಂಸದೆಯೊಂದಿಗೆ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮಾತಿನ ಚಕಮಕಿ

Date:

Advertisements

ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ, ಗುಜರಾತ್‌ನ ಉತ್ತರ ಜಾಮ್‌ನಗರ ಕ್ಷೇತ್ರದ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ತಮ್ಮದೆ ಪಕ್ಷದ ಸಂಸದೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ ಘಟನೆ ಈಗ ಎಲ್ಲಡೆ ವೈರಲ್‌ ಆಗಿದೆ.

ಜಾಮ್‌ನಗರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಶಾಸಕಿ ರಿವಾಬಾ ಜಡೇಜಾ ತಮ್ಮದೆ ಪಕ್ಷದ ಸಹದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದರು.

ಜಾಮ್‌ನಗರ ಪುರಸಭೆಯ ಮೇಯರ್ ಬೀನಾ ಕೊಠಾರಿ ಮತ್ತು ಸಂಸದೆ ಪೂನಾಂಬೆನ್ ಮಾದಮ್ ಅವರೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಮೊದಲು ಬಿಜೆಪಿ ಸಂಸದೆ ಪೂನಾಂಬೆನ್ ಮಾದಮ್ ಪಾದರಕ್ಷೆಯೊಂದಿಗೆ ನಮನ ಸಲ್ಲಿಸಿದರು. ನಂತರ ಆಗಮಿಸಿದ ರಿವಾಬಾ ಜಡೇಜಾ ಪಾದರಕ್ಷೆ ಕಳಚಿ ಗೌರವ ಸಲ್ಲಿಸಿದರು. ಶಾಸಕಿ ಪಾದರಕ್ಷೆ ಕಳಚುವುದನ್ನು ನೋಡಿದ ಸಂಸದೆ ಪೂನಂಬೆನ್ ಮಾದಮ್, ರಿವಾಬಾರನ್ನು ‘ಓವರ್‌ ಸ್ಮಾರ್ಟ್’ ಎಂದು ಸಂಬೋಧಿಸಿದ್ದಾರೆ.

ಈ ವಿಷಯದ ಸಲುವಾಗಿಯೇ ಸಂಸದೆ ಹಾಗೂ ಶಾಸಕಿಯ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಇಬ್ಬರು ಜನಪ್ರತಿನಿಧಿಗಳು ಕೆಲಕಾಲ ಬೈದಾಡಿಕೊಂಡಿದ್ದಾರೆ. ಸಂಸದೆ ಪರವಾಗಿ ಮಾತನಾಡಿದ ಪುರಸಭೆಯ ಮೇಯರ್ ಬೀನಾ ಕೊಠಾರಿ ಅವರನ್ನು ರಿವಾಬಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್‌ ಬಾನು ಪ್ರಕರಣ | ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

“ಮೊದಲನೆಯದಾಗಿ, ಸಂಸದ ಪೂನಂಬೆನ್ ಅವರು ತಮ್ಮ ಶೂಗಳನ್ನು ಧರಿಸಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸಿದರು. ನಂತರ, ನಾನು ನನ್ನ ಪಾದರಕ್ಷೆಗಳನ್ನು ಕಳಚಿ ನಮನ ಸಲ್ಲಿಸಿದೆ. ಇತರ ನಾಯಕರು ನನ್ನನ್ನು ಅನುಸರಿಸಿದರು. ಪ್ರಧಾನಿ ಮತ್ತು ರಾಷ್ಟ್ರಪತಿಗಳು ಸಹ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ತಮ್ಮ ಪಾದರಕ್ಷೆಗಳನ್ನು ತೆಗೆಯುವುದಿಲ್ಲ. ಆದರೆ ಕೆಲವರು ಅತೀ ಬುದ್ಧಿವಂತಿಕೆಯಿಂದ(ಓವರ್‌ ಸ್ಮಾರ್ಟ್) ವರ್ತಿಸುತ್ತಾರೆ ಎಂದು ಪೂನಂಬೆನ್ ಹೇಳುವುದನ್ನು ನಾನು ಕೇಳಿದೆ. ನನ್ನ ಆತ್ಮಗೌರವವನ್ನು ರಕ್ಷಿಸಿಕೊಳ್ಳಲು ಮಾತ್ರ ನಾನು ಮಾತನಾಡಿದ್ದೇನೆ” ಎಂದು ಘಟನೆಯ ರಿವಾಬಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಾಮ್‌ನಗರ ಪುರಸಭೆಯ ಮೇಯರ್ ಬೀನಾ ಕೊಠಾರಿ, ಈ ವಿಷಯವು “ತಮ್ಮ ಪಕ್ಷದ ಆಂತರಿಕ ವಿಷಯ. ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಹೇಳಿ ವಿವಾದದ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X