ಬಿಹಾರ ಚುನಾವಣೆ: ಆರ್‌ಜೆಡಿ ನಾಯಕಿ ಪ್ರತಿಮಾ ಕುಶ್ವಾಹ ಬಿಜೆಪಿಗೆ ಸೇರ್ಪಡೆ

Date:

ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಜೆಡಿ ನಾಯಕಿ ಪ್ರತಿಮಾ ಕುಶ್ವಾಹ ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಆರ್‌ಜೆಡಿಯಲ್ಲಿ ತಳಮಟ್ಟದ ನಾಯಕರಿಗೆ ಗೌರವವಿಲ್ಲ ಎಂದು ಪ್ರತಿಮಾ ಹೇಳಿಕೊಂಡಿದ್ದಾರೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್, ಪ್ರತಿಮಾ ಅವರನ್ನು ಸ್ವಾಗತಿಸಿದ್ದು ಈ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಜೈಸ್ವಾಲ್, “ಸ್ವಜನಪಕ್ಷಪಾತ ಮತ್ತು ವಂಶಪಾರಂಪರ್ಯ ರಾಜಕೀಯ ಆರ್‌ಜೆಡಿ ಮತ್ತು ಕಾಂಗ್ರೆಸ್‌ನಲ್ಲಿ ಪ್ರಚಲಿತವಾಗಿದೆ. ಅದರಿಂದಾಗಿ ನಾಯಕರು ಭ್ರಮನಿರಸನಗೊಂಡಿದ್ದಾರೆ. ಇದೇ ಕಾರಣಕ್ಕೆ ಅವರ ಹಲವು ನಾಯಕರು ಬಿಜೆಪಿಗೆ ಸೇರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಈ ಬಾರಿ ಎನ್‌ಡಿಎ ಬಿಹಾರದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಸಂಸದ

ಬಿಜೆಪಿಗೆ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಮಾ ಕುಶ್ವಾಹ, “ಲಾಲು ಪ್ರಸಾದ್ ಯಾದವ್ ನೇತೃತ್ವದಲ್ಲಿದ್ದ ಆರ್‌ಜೆಡಿ ಪಕ್ಷ ಇನ್ನು ಮುಂದೆ ಇರಲ್ಲ. ಪಕ್ಷದಲ್ಲಿ ತಳಮಟ್ಟದ ನಾಯಕರಿಗೆ ಗೌರವವಿಲ್ಲ. ಕುಟುಂಬ ರಾಜಕಾರಣದಿಂದಾಗಿ ಪಕ್ಷ ಆಳವಾಗಿ ಛಿದ್ರಗೊಂಡಿದೆ” ಎಂದು ಹೇಳಿದ್ದಾರೆ.

“ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ಬಿಹಾರದ ಯುವಕರಿಗೆ ಉದ್ಯೋಗ ನೀಡಿದ್ದೇನೆ ಎಂದು ಹೇಳಿದ್ದರು. ಆರ್‌ಜೆಡಿ ತನ್ನ ಆಡಳಿತದಲ್ಲಿರುವ ಜನರಿಗೆ ನಿಜವಾಗಿಯೂ ಉದ್ಯೋಗ ನೀಡಿತ್ತು, ಆದರೆ ಅವರ ಭೂಮಿಯನ್ನು ಕಸಿದುಕೊಂಡು ಉದ್ಯೋಗ ನೀಡಿದೆ” ಎಂದು ಉದ್ಯೋಗಕ್ಕಾಗಿ ಭೂಮಿ ಹಗರಣದ ಉಲ್ಲೇಖ ಮಾಡಿದ್ದಾರೆ.

ಇನ್ನು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ತೇಜಸ್ವಿ ಅವರ ಹೇಳಿಕೆಯನ್ನು ತಿರಸ್ಕರಿಸಿದ ಅವರು, “ತೇಜಸ್ವಿ ಅವರು ತಮ್ಮ ಕುಟುಂಬಕ್ಕೆ ಮಾತ್ರ ಮೀಸಲಾತಿ ನೀಡಿದ್ದಾರೆ. ಮಹಿಳೆಯರು ಮತ್ತು ಹಿಂದುಳಿದ ವರ್ಗಗಳಿಗೆ ಎನ್‌ಡಿಎ ಸರ್ಕಾರವು ನಿಜವಾದ ಮೀಸಲಾತಿಯನ್ನು ಒದಗಿಸಿದೆ” ಎಂದರು.

ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್‌ನಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. ಅದಕ್ಕೂ ಮುನ್ನವೇ ಬಿಜೆಪಿ ವಿಪಕ್ಷಗಳ ನಾಯಕರುಗಳನ್ನು ತನ್ನೆಡೆ ಸೆಳೆದುಕೊಳ್ಳುವ ತಂತ್ರವನ್ನು ನಡೆಸುತ್ತಿದೆ. ಇನ್ನೊಂದೆಡೆ ಜೆಡಿಯು-ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡ ಜೆಡಿಯುನ ಅಲ್ಪಸಂಖ್ಯಾತ ನಾಯಕರು ಜೆಡಿಯು ತೊರೆದಿದ್ದಾರೆ. ಇನ್ನು ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಹಾರದ ಬಿಜೆಪಿ ಸಂಸದ ಅಜಯ್‌ ಕುಮಾರ್ ನಿಶಾದ್ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...