ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಮಿತ್ರಪಕ್ಷ ಆರ್‌ಎಲ್‌ಡಿ ವಕ್ತಾರ ರಾಜೀನಾಮೆ

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ವಕ್ತಾರ ರೋಹಿತ್ ಜಾಖರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

“ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದು ಮಹಿಳಾ ಕುಸ್ತಿಪಟುಗಳಿಗೆ ಮಾಡಿದ ಅವಮಾನವಾಗಿದೆ. ನನಗೆ ದೇಶದ ಗೌರವ ಎಂದಿಗೂ ಕೂಡಾ ಮೊದಲ ಸ್ಥಾನದಲ್ಲಿರುತ್ತದೆ” ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಇದನ್ನು ಓದಿದ್ದೀರಾ?  ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

“ನಾನು ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಯಾಗುವುದಿಲ್ಲ. ಆದರೆ ಸಾಮಾಜಿಕ ಸಮಸ್ಯೆಗಳ ವಿರುದ್ಧ ನನ್ನ ಹೋರಾಟವನ್ನು ನಾನು ಮುಂದುವರಿಸುತ್ತೇನೆ” ಎಂದೂ ಜಾಖರ್ ತಿಳಿಸಿದ್ದಾರೆ.

ಆರ್‌ಎಲ್‌ಡಿಯ ಪ್ರಮುಖ ನಾಯಕರುಗಳಲ್ಲಿ ಜಾಕರ್ ಕೂಡಾ ಒಬ್ಬರು. ಹಾಗೆಯೇ ರಾಷ್ಟ್ರೀಯ ಜಟ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷರೂ ಆಗಿದ್ದಾರೆ. ಒಂದು ದಶಕಗಳ ಕಾಲದಿಂದ ಆರ್‌ಎಲ್‌ಡಿಯಲ್ಲಿರುವ ಜಾಕರ್‌ ರೈತರ ಆಂದೋಲನದ ಜೊತೆಯೂ ಕೈಜೋಡಿಸಿದ್ದಾರೆ.

ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿದೆ.

ಇದನ್ನು ಓದಿದ್ದೀರಾ?  ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷನಾಗಿ ಬ್ರಿಜ್‌ ಭೂಷಣ್ ಆಪ್ತ: ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಸಾಕ್ಷಿ ಮಲಿಕ್

ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನದಲ್ಲಿದ್ದಾಗ ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. ಆದರೆ ಬ್ರಿಜ್ ಭೂಷಣ್ ಈ ಆರೋಪವನ್ನು ಅಲ್ಲಗಳೆದಿದ್ದಾರೆ. ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇನ್ನು ಈ ಹಿಂದೆ ಬಿಜೆಪಿಯೊಂದಿಗೆ ಆರ್‌ಎಲ್‌ಡಿ ಮೈತ್ರಿ ಮಾಡಿಕೊಂಡ ಬಳಿಕ ಆರ್‌ಎಲ್‌ಡಿ ರಾಷ್ಟ್ರೀಯ ಉಪಾಧ್ಯಕ್ಷ ಶಾಹಿದ್ ಸಿದ್ಧಿಕಿ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಮಧ್ಯಪ್ರದೇಶ | ಭೀಕರ ಅಪಘಾತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ಸಾವು

ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ...