ರಸ್ತೆಗುಂಡಿ ಕಾಮಗಾರಿ | ಖುದ್ದು ರಾತ್ರಿ ವೇಳೆ ನಗರ ಸಂಚಾರ ನಡೆಸಿ ಪರಿಶೀಲಿಸುವೆ: ಡಿ ಕೆ ಶಿವಕುಮಾರ್

Date:

Advertisements

ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ತಿಳಿಸಿದರು.

“ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು.

Advertisements

ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ

“ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್‌-ಮುನಿರತ್ನ ತೋರಿದ ಪಾತಕದ ಮಾದರಿ ಎಂಥವು? ಮಿಕ್ಕವರು ಅನುಸರಿಸಿದರೆ ಹೆಣ್ಣುಮಕ್ಕಳ ಪಾಡೇನು?

ಆರ್. ಅಶೋಕ್ ಮೇಲಿನ ಸಂಚು ಕೇಳಿ ದಿಗ್ಬ್ರಮೆ

ಶಾಸಕ ಮುನಿರತ್ನ ಪ್ರಕರಣಗಳ ವಿಚಾರವಾಗಿ ಎಸ್ ಐಟಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಅನೇಕರು ಒತ್ತಡ ಹಾಕುತ್ತಿದ್ದಾರೆ. ನೀವು ಇದರ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ “ನನಗೆ ಸಿಎಂ ಭೇಟಿ ಸಾಧ್ಯವಾಗಿಲ್ಲ. ಆದರೆ ಆರ್. ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ” ಎಂದರು.

“ಮುನಿರತ್ನ ವಿಚಾರವಾಗಿ ಅಶೋಕ್ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ. ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ” ಎಂದರು.

ಡಿ.ಕೆ.ಸಹೋದರರ ನೇರ ಷಡ್ಯಂತ್ರ ಎಂದು ವಿಜಯೇಂದ್ರ, ಅಶ್ವತ್ಥನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ “ಅವರುಗಳು ನನ್ನ ನೆನೆಸಿ ಕೊಳ್ಳುತ್ತೀರಬೇಕು” ಎಂದು ಹೇಳಿದರು.

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಮಾಡಲಾಗಿದ್ದು, ಮುಂದಿನ ರಾಜಕೀಯ ಹೋರಾಟ ಹೇಗಿರಲಿದೆ ಎಂದು ಕೇಳಿದಾಗ “ಇದರ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X