“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ಭಾನುವಾರ ವಿವಾದದಲ್ಲಿ ಸಿಲುಕಿದ್ದಾರೆ. ಹಾಗೆಯೇ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬಿಜೆಪಿಯನ್ನು ‘ಮಹಿಳಾ ವಿರೋಧಿ ಪಕ್ಷ’ ಎಂದು ಕರೆದಿರುವ ಕಾಂಗ್ರೆಸ್, “ಬಿಧುರಿ ಹೇಳಿಕೆ ನಾಚಿಕೆಗೇಡಿನವು, ಮಹಿಳೆಯರ ವಿಷಯದಲ್ಲಿ ಅವರ ಕೊಳಕು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇದು ಬಿಜೆಪಿಯ ನಿಜವಾದ ಮುಖ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಲೋಕಸಭೆಯ ಚೊಚ್ಚಲ ಭಾಷಣದಲ್ಲೇ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
“ಬಿಧುರಿ ಮಾತ್ರವಲ್ಲದೆ ಬಿಜೆಪಿಯ ಉನ್ನತ ನಾಯಕತ್ವವೂ ಕೈಮುಗಿದು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆ ಕೇಳಬೇಕು” ಎಂದು ಕಾಂಗ್ರೆಸ್ ನಾಯಕಿ ಆಗ್ರಹಿಸಿದ್ದಾರೆ.
#RameshBidhuri, who had insulted Kunwar Danish Ali in the Parliament by calling him terrorist Katva Mullah, is now openly saying that once he wins, he will make the roads of this area like Priyanka Gandhi's cheeks.
— Md Hafizur Rahman (@MdHafiz59473117) January 5, 2025
Bad words of a bad man.
Shame on you Ramesh Bidhuri pic.twitter.com/6ngrO2CviV
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಧುರಿ ಬಿಜೆಪಿ ಅಭ್ಯರ್ಥಿಯಾಗಿದ್ದು, ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದಾರೆ. ಇಂತಹ ಕೆಟ್ಟ ಮನಸ್ಥಿತಿ ಇರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಎಪಿ ಬಿಧುರಿ ಹೇಳಿಕೆಯನ್ನು ಖಂಡಿಸಿದೆ.
“ಇದು ನಾಚಿಕೆಗೇಡಿನ ಹೇಳಿಕೆ, ಈ ವ್ಯಕ್ತಿ (ಬಿಜೆಪಿ ನಾಯಕ ರಮೇಶ್ ಬಿಧುರಿ) ಈ ರೀತಿ ಹೆಣ್ಣು ಮಕ್ಕಳನ್ನು ನಿಂದಿಸಿದ್ದಾರೆ ಎಂದು ತಿಳಿದ ನಂತರವೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ. ಹೀಗಿದ್ದಾಗ ಮಹಿಳೆಯರನ್ನು ಅವರು ಸುರಕ್ಷಿತವಾಗಿರಿಸುವುದು ಹೇಗೆ? ಯಾರು ನಂಬುತ್ತಾರೆ? ಗೆಲ್ಲದೆಯೇ ಹೀಗೆ ಮಾಡುತ್ತಾರೆ, ಗೆದ್ದರೆ ಇನ್ನೇನು ಮಾಡಬಹುದು” ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ಲೋಕಸಭೆಯಲ್ಲಿ ಅಣ್ಣ-ತಂಗಿ ಅಬ್ಬರ; ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ
ಇನ್ನು ಬಿಧುರಿ ಮಾಧ್ಯಮವೊಂದರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಆರ್‌ಜೆಡಿ ನಾಯಕ ಬಿಹಾರದ ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಯಂತೆ ನುಣುಪಾಗಿ ನಿರ್ಮಿಸುವುದಾಗಿ ಹೇಳಿದ್ದರು ಎನ್ನುವ ಮೂಲಕ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಬಿಧುರಿ ತನ್ನ ವಿವಾದಾತ್ಮಕ ಹೇಳಿಕೆಗಳನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2023ರಲ್ಲಿ ಬಿಧುರಿ ಲೋಕಸಭೆಯಲ್ಲಿ ಆಗಿನ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಕೋಮುವಾದಿ ಟೀಕೆಗಳನ್ನು ಮಾಡಿದ್ದರು. ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ ಎಂದು ಬಿಧುರಿ ಕರೆದಿದ್ದರು.
