ವಿಶ್ವಬ್ಯಾಂಕ್‌ನಿಂದ ಪಡೆದ 14,000 ಕೋಟಿ ರೂ. ಸಾಲ ಬಿಹಾರ ಚುನಾವಣೆಗೆ ಬಳಕೆ: ಜೆಎಸ್‌ಪಿ ಆರೋಪ

Date:

ನಿತೀಶ್‌ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವು ಬಿಹಾರಕ್ಕಾಗಿ ವಿಶ್ವಬ್ಯಾಂಕ್‌ನಿಂದ 14,000 ಕೋಟಿ ರೂ. ಸಾಲ ಪಡೆದಿತ್ತು. ಆದರೆ, ಆ ಸಾಲವನ್ನು ವಿಧಾನಸಭಾ ಚುನಾವಣೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಚುನಾವನಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜೆಎಸ್‌ಪಿ ಆರೋಪಿಸಿದೆ.

- Advertisement -

ಇತ್ತೀಚೆಗಷ್ಟೇ ಮುಗಿದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳಲ್ಲಿ ಭಾರೀ ಗೆಲುವು ಸಾಧಿಸಿದೆ. 36 ಸ್ಥಾನಗಳೊಂದಿಗೆ ಮಹಾಘಟಬಂಧನ್‌ ಕಳಪೆ ಪ್ರದರ್ಶನ ನೀಡಿದೆ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಎಸ್‌ಪಿ ತನ್ನ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇದೀಗ, ಜೆಡಿಎಸ್‌ ನಾಯಕರು ನಿತೀಶ್‌ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಎಸ್‌ಪಿ ರಾಷ್ಟ್ರಾಧ್ಯಕ್ಷ ಉದಯ್ ಸಿಂಗ್, “ಜೂನ್‌ನಿಂದ ಚುನಾವಣೆ ಘೋಷಣೆಯಾಗುವವರೆಗೆ ಸರ್ಕಾರ 40,000 ಕೋಟಿ ರೂ. ಸಾರ್ವಜನಿಕ ಹಣ ವೆಚ್ಚ ಮಾಡಿದೆ. ಅದರಲ್ಲಿ ವಿಶ್ವಬ್ಯಾಂಕ್‌ನಿಂದ ಪಡೆದ 14,000 ಕೋಟಿ ರೂ.ಗಳನ್ನು ದೇಣಿಗೆ ಮತ್ತು ಉಚಿತ ಕೊಡುಗೆಗಳ ಹೆಸರಿನಲ್ಲಿ ಮತ ಖರೀದಿಗೆ ಬಳಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಚುನಾವಣೆಗೂ ಕೆಲವ ದಿನಗಳ ಮುನ್ನ ಮಹಿಳೆಯರ ಖಾತೆಗೆ 10,000 ರೂ. ಜಮೆ ಮಾಡಿದ್ದರ ಬಗ್ಗೆ ಮಾತನಾಡಿದ ಅವರು, “ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮತದಾನಕ್ಕೂ ಮುನ್ನ ಹಣ ಜಮೆಯಾಗುತ್ತಿತ್ತು. ಇದು ಬಿಹಾರ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ನಡೆದಿದೆ” ಎಂದು ಹೇಳಿದ್ದಾರೆ.

ಸಾರ್ವಜನಿಕ ಹಣವನ್ನು ದುರುಪಯೋಗ ಮಾಡದೇ ಇದ್ದರೆ ಎನ್‌ಡಿಎ ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದರು. “ಜನ ಸುರಾಜ್ ಪಕ್ಷವು 2,000 ರೂಪಾಯಿ ವೃದ್ಧಾಪ್ಯ ಪಿಂಚಣಿ ಭರವಸೆ ನೀಡಿದಾಗಲೇ ಸರಕಾರ ಈ ಮೊತ್ತವನ್ನು 700ರಿಂದ 1,100 ರೂಪಾಯಿಗೆ ಹೆಚ್ಚಿಸಿತು” ಎಂದು ಸಿಂಗ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...