ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ: ಡಿಕೆ ಶಿವಕುಮಾರ್

Date:

  • ಏತ ನೀರಾವರಿ ಯೋಜನೆಗೆ ವಿದ್ಯುತ್​ ಬಳಕೆ
  • ‘ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ’

ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಮಂಗಳವಾರ ನಡೆದ ಏಳನೇ ದಿನದ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಏತ ನೀರಾವರಿ ಯೋಜನೆಗೆ ಉಚಿತ ವಿದ್ಯುತ್ ಕೊಡಿ ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​ “ಏತ ನೀರಾವರಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿರುವ ವಿದ್ಯುತ್​ಗೆ ಬಿಲ್ ಕಟ್ಟಿಲ್ಲ. ಕೋಟಿ ಕೋಟಿ ಹಣ ಬಾಕಿ ಇಟ್ಟುಕೊಂಡಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತುಮಕೂರು ಗ್ರಾಮಾಂತರದಲ್ಲಿ ಆರು ಕೋಟಿ ರೂ. ಹಣ ಬಾಕಿ ಉಳಿದಿದೆ. ಚನ್ನಪಟ್ಟಣದಲ್ಲಿ ಐದು ಕೋಟಿ ರೂ. ಹಣ ಬಾಕಿ ಇದೆ. ತುಮಕೂರು ಗ್ರಾಮಾಂತರ, ಚನ್ನಪಟ್ಟಣದಲ್ಲಿ ಕೆರೆ ತುಂಬಿಸಲು ಏತ ನೀರಾವರಿ ಯೋಜನೆ ಬೇಕು ಅಂತಾರೆ. ಆದರೆ ಯಾರು ಸಹ ಇಂಧನ ಇಲಾಖೆಗೆ ಹಣ ಕೊಡುತ್ತಿಲ್ಲ. ಹೀಗಾಗಿ ಇಂಧನ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗಳ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, “ನಮ್ಮ ಇಲಾಖೆಗೆ ಬರಬೇಕಾದ ಬಾಕಿ ಹಣ ಜಾಸ್ತಿ ಇದೆ. ಯಾರೂ ಸಹ ಇಂಧನ ಇಲಾಖೆಗೆ ಪಾವತಿಸದೇ ಬಾಕಿ ಉಳಿದಿರುವ ಹಣ ನೀಡಿಲ್ಲ. ಹೀಗಾಗಿ ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಆರ್ಥಿಕವಾಗಿ ಇದು ದುಬಾರಿ ಸಹ ಅಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ...

ತುಮಕೂರು | ಅಧಿಕಾರಕ್ಕಾಗಿ ಊರೂರು ಅಲೆಯುವ ವಿ.ಸೋಮಣ್ಣ ಜಿಲ್ಲೆಗೆ ಬೇಕೆ? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ...

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...