ಪ್ರಧಾನಿ ಮೋದಿಯ ಬ್ರೆಜಿಲ್ ಪ್ರವಾಸಕ್ಕೆ ಬರೋಬ್ಬರಿ 89 ಕೋಟಿ ರೂ. ವೆಚ್ಚ

Date:

ಪ್ರಧಾನಿ ಮೋದಿ ಅವರು ಜುಲೈ ತಿಂಗಳಿನಲ್ಲಿ ಕೈಗೊಂಡಿದ್ದ ಎರಡು ದಿನಗಳ ಬ್ರಜಿಲ್‌ ಪ್ರವಾಸಕ್ಕೆ  ಬರೋಬ್ಬರಿ 89 ಕೋಟಿ ರೂ. ವೆಚ್ಚವಾಗಿದೆ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ.

- Advertisement -

ಬೆಜಿಲ್‌ನಲ್ಲಿ ಜುಲೈ 6 ಮತ್ತು 7ರಂದು ಬ್ರಿಕ್ಸ್‌ ಶೃಂಗಸಭೆ ನಡೆಯಿತು. ಆ ಸಭೆಯಲ್ಲಿ ಭಾಗಿಯಾಗಲು ಮೋದಿ ಅವರು ಬ್ರೆಜಿಲ್‌ಗೆ ತೆರಳಿದ್ದರು. ಈ ಎರಡು ದಿನಗಳ ಬ್ರಜೆಲ್ ಪ್ರವಾಸಕ್ಕೆ ತಗುಲಿದ ವೆಚ್ಚದ ಕುರಿತು ಮಾಹಿತಿ ನೀಡುವಂತೆ ವ್ಯಕ್ತಿಯೊಬ್ಬರು ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಕೇಂದ್ರ ಸರ್ಕಾರವು ಉತ್ತರಿಸಿದೆ – ಅಂಕಿಅಂಶಗಳನ್ನು ಒದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿದೇಶಾಂಗ ಸಚಿವಾಲಯವು ಒದಗಿಸಿರುವ ಅಂಕಿಅಂಶದಂತೆ, ಮೋದಿ ಅವರ ಬ್ರೆಜಿಲ್ ಪ್ರವಾಸಕ್ಕೆ 89,00,96,770 ರೂ. ವೆಚ್ಚವಾಗಿದೆ. ಈ ಪೈಕಿ, ಹೋಟೆಲ್ ವ್ಯವಸ್ಥೆಗೆ 3,04,13,551 ರೂ., ಆಹಾರ ವೆಚ್ಚ 57,68,649 ರೂ., ಸಾರಿಗೆ ವೆಚ್ಚ 1,89,69,860 ರೂ., ಇತರ ವೆಚ್ಚಗಳು 3,39,44,710 ರೂ. ಎಂದು ಅಂಶಅಂಶಗಳು ವಿವರಿಸಿವೆ. ಗಮನಾರ್ಹವೆಂದರೆ, ಲೆಕ್ಕವಿಲ್ಲದ ಇತರ ವೆಚ್ಚವೇ 3.39 ಕೋಟಿ ರೂ. ಇದೆ.

ಎರಡು ದಿನಗಳ ಪ್ರವಾಸಕ್ಕೆ ಮೋದಿ ಅವರು 89 ಕೋಟಿ ರೂ. ಖರ್ಚು ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ದೇಶದ 80 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದು, ಇಂದಿಗೂ ತಮ್ಮ ಜೀವನಕ್ಕೆ ಉಚಿತ ಪಡಿತರ ಆಹಾರದ ಮೇಲೆ ಅವಲಂಬಿತರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಜನರ ಕಲ್ಯಾಣಕ್ಕಾಗಿ ಹಣವನ್ನು ವ್ಯಯಿಸಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಐಷಾರಾಮಿ ಪ್ರವಾಸಕ್ಕಾಗಿ ಸರ್ಕಾರದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...