ಕೇರಳ | ದೇವಸ್ಥಾನದಲ್ಲಿ ಆಪರೇಷನ್ ಸಿಂಧೂರ ಬರವಣಿಗೆ, ಆರ್‌ಎಸ್‌ಎಸ್‌ ಧ್ವಜವಿರುವ ರಂಗೋಲಿ: ಎಫ್‌ಐಆರ್ ದಾಖಲು

Date:

ಕೇರಳದ ಕೊಲ್ಲಂನ ಪಾರ್ಥಸಾರಥಿ ದೇವಸ್ಥಾನದ ಹೊರಗೆ ಆರ್‌ಎಸ್‌ಎಸ್ ಧ್ವಜ ಮತ್ತು ಆಪರೇಷನ್ ಸಿಂಧೂರ ಎಂದು ಬರೆದಿರುವ ಹೂವಿನ ರಂಗೋಲಿ(ಪೂಕ್ಕಲಂ) ಕಾಣಿಸಿಕೊಂಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸದ್ಯ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಬಿಜೆಪಿ ನಾಯಕರು ಇದು ಆಪರೇಷನ್ ಸಿಂಧೂರ ಬರವಣಿಗೆಯ ರಂಗೋಲಿಗೆ ಪ್ರಕರಣ ದಾಖಲಿಸಿರುವುದು ದೇಶದ್ರೋಹ ಎಂದು ರಾಜಕೀಯಕ್ಕಿಳಿದಿದ್ದಾರೆ. ಆದರೆ ಎಫ್‌ಐಆರ್ ದಾಖಲಿಸಿರುವುದು ರಂಗೋಲಿಯಲ್ಲಿ ಆರ್‌ಎಸ್‌ಎಸ್‌ ಧ್ವಜ ಮಾಡಿರುವುದಕ್ಕೆ ಎಂದು ಪೊಲೀಸರು ಈಗಾಗಲೇ ಸ್ಪಷ್ಟಣೆಯನ್ನು ನೀಡಿದ್ದಾರೆ.

- Advertisement -

ಎಫ್‌ಐಆರ್ ದಾಖಲಿಸಿರುವುದರ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ರಾಜೀವ್ ಚಂದ್ರಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇದು ನಾಚಿಕೆಗೇಡಿನ ಮತ್ತು ದೇಶದ್ರೋಹದ ಕೃತ್ಯ’ ಎಂದು ರಾಜೀವ್ ಹೇಳಿದ್ದಾರೆ. ಆದರೆ ಎಫ್‌ಐಆರ್ ದಾಖಲಿಸಿರುವುದು ಆಪರೇಷನ್ ಸಿಂಧೂರ ಎಂಬ ರಂಗೋಲಿ ಸಂಬಂಧವಲ್ಲ, ನಿರ್ದಿಷ್ಟವಾಗಿ ಆರ್‌ಎಸ್‌ಎಸ್ ಧ್ವಜದ ಬಳಕೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಣೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಿಜೆಪಿ ಪ್ರಕಾರ ‘ಆಪರೇಷನ್ ಸಿಂಧೂರ’ ಯಶಸ್ವಿ: ಅಭಿಯಾನ ಆರಂಭಿಸಿದ ಸ್ತ್ರೀದ್ವೇಷಿಗಳು!

ಕೇರಳದಲ್ಲಿ ಓಣಂ ಸಂದರ್ಭ ಹೂವಿನಿಂದಲೇ ರಂಗೋಲಿ ಮಾಡಲಾಗುತ್ತದೆ. ಈ ಪ್ರದೇಶದಲ್ಲಿ ಈ ಹಿಂದೆ ರಾಜಕೀಯವಾಗಿ ಉದ್ವಿಗ್ನತೆ ಕಂಡುಬಂದಿದ್ದ ಕಾರಣ ಈ ಬಾರಿ ಪೂಕ್ಕಳಂನಲ್ಲಿ ಯಾವುದೇ ರಾಜಕೀಯ ಧ್ವಜಗಳು ಅಥವಾ ಚಿಹ್ನೆಗಳನ್ನು ಪ್ರದರ್ಶಿಸಬಾರದು ಎಂದು ಸಿಪಿಐ (ಎಂ) ಮತ್ತು ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆಯೇ ನಿರ್ದೇಶನ ನೀಡಲಾಗಿತ್ತು. ಈ ಷರತ್ತಿಗೆ ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಷರತ್ತಿಗೆ ಒಪ್ಪಿಕೊಂಡಿದ್ದರೂ ಹಬ್ಬದ ಸಮಯದಲ್ಲಿ ಆರ್‌ಎಸ್‌ಎಸ್ ಧ್ವಜದ ರಂಗೋಲಿ ಬಿಡಿಸಲಾಗಿದೆ. ಒಪ್ಪಂದವನ್ನು ಉಲ್ಲಂಘಿಸಿ ಉದ್ವಿಗ್ನತೆಗೆ ಕಾರಣ ಉಂಟು ಮಾಡಿದ ಕಾರಣಕ್ಕಾಗಿ 27 ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಬಿಜೆಪಿ ಮುಖಂಡರು ಈ ವಿಚಾರವನ್ನು ತಿರುಚುತ್ತಿದ್ದು ಆಪರೇಷನ್ ಸಿಂಧೂರ ಎಂದು ರಂಗೋಲಿ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ಹರಡುತ್ತಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜೀವ್ ಚಂದ್ರಶೇಖರ್, “ಆಪರೇಷನ್ ಸಿಂಧೂರ ನಮ್ಮ ಹೆಮ್ಮೆ. ಇದು ಭಾರತದ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಧೈರ್ಯದ ಸಂಕೇತ. ಎಫ್‌ಐಆರ್ ದಾಖಲಿಸಿ ಕೇರಳ ಪೊಲೀಸರು ಈ ದಾಳಿಯಲ್ಲಿ ಬಲಿಯಾದ 26 ಮಂದಿಗೆ ಮತ್ತು ಅವರ ಕುಟುಂಬಕ್ಕೆ, ಪ್ರತಿಯೊಬ್ಬ ಯೋಧರಿಗೂ ಅವಮಾನ ಮಾಡಿದ್ದಾರೆ” ಎಂದು ದೂರಿದ್ದಾರೆ.

“ಕೇರಳವು ಜಮಾತ್-ಇ-ಇಸ್ಲಾಮಿ ಅಥವಾ ಪಾಕಿಸ್ತಾನದಿಂದ ಆಳಲ್ಪಡುವ ಭೂಮಿಯಲ್ಲ ಮತ್ತು ಎಂದಿಗೂ ಆಗುವುದಿಲ್ಲ. ಇದು ಭಾರತ ಎಂಬುದನ್ನು ಕೇರಳ ಪೊಲೀಸರು ಮರೆಯಬಾರದು. ಅವರಿಗೆ ಮತ್ತು ಮುಖ್ಯಮಂತ್ರಿ/ಗೃಹ ಸಚಿವ ಪಿಣರಾಯಿ ವಿಜಯನ್ ಜಿ ಅವರಿಗೆ, ಈ ನಾಚಿಕೆಗೇಡಿನ ಮತ್ತು ದೇಶದ್ರೋಹದ ಎಫ್‌ಐಆರ್ ಅನ್ನು ಹಿಂತೆಗೆದುಕೊಳ್ಳಿ ಎಂದು ನಾನು ಹೇಳುತ್ತೇನೆ. ಈಗಲೇ!” ಅವರು ಹೇಳಿದರು.

ಅಧಿಕಾರಿಗಳು ಎಫ್‌ಐಆರ್ ಬಗ್ಗೆ ಸ್ಪಷ್ಟಣೆ ನೀಡಿದರೂ ತಪ್ಪು ಮಾಹಿತಿಯನ್ನು ಬಿಜೆಪಿ ನಾಯಕರುಗಳು ಹಬ್ಬುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...