RSS ಭಾರತದ ತಾಲಿಬಾನ್: ಬಿ.ಕೆ ಹರಿಪ್ರಸಾದ್

Date:

ಆರ್‌ಎಸ್‌ಎಸ್‌ – ಭಾರತದ ತಾಲಿಬಾನ್‌ ಇದ್ದಂತೆ. ಅದು ಭಾರತದ ಕಾನೂನಿನ ಅಡಿಯಲ್ಲಿ ನೋಂದಣಿಯಾಗಿಲ್ಲದ ಸಂಘಟನೆ. ನೋಂದಣಿ ಮಾಡಿಕೊಳ್ಳದೆ, ಸರ್ಕಾರದ ಅನುಮತಿ ಪಡೆಯದೆ ಸರ್ಕಾರಿ ಜಾಗಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

- Advertisement -

ಆರ್‌ಎಸ್‌ಎಸ್‌ನ ಶಾಖೆ ಚಟುವಟಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಸರ್ಕಾರಿ ಜಾಗಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಿದರೂ, ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ಆದರೆ, ಆರ್‌ಎಸ್‌ಎಸ್‌ ತನ್ನ ಕಾರ್ಯಕ್ರಮಗಳಿಗೆ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿದೆ. ಇದು ಕಾನೂನುಬಾಹಿರ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಕಾರ್ಯಕ್ರಮಗಳನ್ನು ಮಾಡುತ್ತಿದೆ. ಆದರೆ, ಕಾರ್ಯಕ್ರಮಗಳಿಗೆ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿದೆ. ನಾವು ಹೇಳುವುದಿಷ್ಟೇ, ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ” ಎಂದು ಕೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

“ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ನಡೆಸುವ ಜನರನ್ನು ಪೊಲೀಸರಿಂದ ತಕ್ಷಣವೇ ಬಂಧಿಸಲಾಗುತ್ತದೆ. ಆದರೆ, ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಈ ಧೋರಣೆಯನ್ನೇ ನಾವು ಪ್ರಶ್ನಿಸುತ್ತಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ತನ್ನ ಕಾರ್ಯಕ್ರಮಗಳನ್ನು ನಡೆಸಲು ಹೋಗಿದ್ದ ಆರ್‌ಎಸ್‌ಎಸ್‌ ಸದಸ್ಯರ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ. ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...