ಆರ್‌ಎಸ್‌ಎಸ್‌ನ ಒಬ್ಬನಾದರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ: ಸಿದ್ದರಾಮಯ್ಯ

Date:

  • ಎಸ್‌ಸಿ ಮೀಸಲಾತಿ ಹೆಚ್ಚಳ ಊರ್ಜಿತವೇ ಆಗಿಲ್ಲ
  • ಕರಾವಳಿ ಗಲಾಟೆಗಳಿಗೆ ಶೂಧ್ರರಷ್ಟೇ ಬಲಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಂಕಲ್ಪ ಅಧಿವೇಶನದಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

“ಈ ಬಿಜೆಪಿ ಎನ್ನುವುದು ಆರ್‌ಎಸ್‌ಎಸ್‌ನ ರಾಜಕೀಯ ಅಂಗ. ಇದನ್ನು ನಿಯಂತ್ರಿಸುವುದು ಆರ್‌ಎಸ್‌ಎಸ್‌ ಮತ್ತು ಹಿಂದೂ ಮಹಾಸಭಾ. ಗೋಲ್ವಾಲ್ಕರ್‌ ಅವರ ಚಿಂತನ ಗಂಗಾ ಪುಸ್ತಕದಲ್ಲಿ ಮತ್ತು ಸಂಘದ ಮುಖವಾಣಿ ಆರ್ಗನೈಸರ್‌ ಪತ್ರಿಕೆಯಲ್ಲಿ ಬಾಬಾ ಸಾಹೇಬರು ರಚನೆ ಮಾಡಿರುವ ಸಂವಿಧಾನವನ್ನು ಅವರು ಒಪ್ಪಿಕೊಂಡಿಲ್ಲ” ಎಂದು ಹೇಳಿದ್ದಾರೆ.

“ಗೋಲ್ವಲ್ಕರ್ ತನ್ನ ಕೃತಿಯಲ್ಲಿ ಈ ದೇಶಕ್ಕೆ ಹೊಂದಾಣಿಕೆ ಇಲ್ಲದ ಸಂವಿಧಾನ ಎಂದು ಬರೆದಿದ್ದರು. ಇದು ಆರ್‌ಎಸ್‌ಎಸ್‌ಗೆ ಸಂವಿಧಾನದ ಬಗ್ಗೆ ಕವಡೆಕಾಸಿನ ಗೌರವ ಇಲ್ಲ ಎಂಬುದನ್ನು ತೋರಿಸುತ್ತದೆ. ಅವರು ಸಂವಿಧಾನ ಹೇಳುವ ಸಮಾನತೆಗೆ ವಿರುದ್ಧವಾದವರು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರ್‌ಎಸ್‌ಎಸ್‌ನವರು ಸಂವಿಧಾನ ಹೇಳುವ ಸಮಾನತೆಗೆ ವಿರುದ್ಧವಾದವರು. ಸಮ ಸಮಾಜ ಸ್ಥಾಪನೆ, ಎಲ್ಲರಿಗೂ ಶಿಕ್ಷಣ ನೀಡುವುದು, ಸಂಪತ್ತಿನಲ್ಲಿ ಪಾಲುದಾರರನ್ನಾಗಿ ಮಾಡುವುದು ಅವರಿಗೆ ಇಷ್ಟವಿಲ್ಲ” ಎಂದಿದ್ದಾರೆ.

“ಬಾಬಾ ಸಾಹೇಬರು ಸಂವಿಧಾನ ಅಂಗೀಕಾರವಾಗುವ ಹಿಂದಿನ ದಿನವೇ ಅಸಮಾನತೆ ಹೊಗಲಾಡಿಸಬೇಕು. ಒಂದು ವೇಳೆ ಇದನ್ನು ಮಾಡದಿದ್ದರೆ ಈ ಅಸಮಾನತೆಗೆ ಒಳಗಾಗಿರುವ ಜನರೇ ಪ್ರಜಾಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆಂದು ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದಾರೆ.

“ಯಾವಾಗೆಲ್ಲ ಹಿಂದುಳಿದ ಸಮುದಾಯಗಳಿಗೆ, ಮಹಿಳೆಯರಿಗೆ ಮತ್ತು ಶೋಷಿತ ಜನರಿಗೆ ಮೀಸಲಾತಿ ನೀಡುವ ವಿಚಾರ ಬಂದಿದೆ ಆಗೆಲ್ಲ ಅದನ್ನು ವಿರೋಧ ಮಾಡಿದ್ದು ಬಿಜೆಪಿ. ಮಂಡಲ್‌ ಕಮಿಷನ್‌ ವರದಿ ವಿರೋಧ ಮಾಡಿದ್ದು ಬಿಜೆಪಿ, ಶಾಲಾ ಮಕ್ಕಳನ್ನು ಎತ್ತಿಕಟ್ಟಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದವರು ಇದೇ ಬಿಜೆಪಿಯವರು” ಎಂದು ಹರಿಹಾಯ್ದಿದ್ದಾರೆ.

“ಪದೇಪದೆ ಇನ್ನೆಷ್ಟು ವರ್ಷ ಮೀಸಲಾತಿ ಇರಬೇಕು ಎಂದು ಪ್ರಶ್ನಿಸುತ್ತಿದ್ದವರು ಬಿಜೆಪಿಯವರು. ಈಗ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿದ ಮೇಲೆ ಬಾಯಿ ಮುಚ್ಚಿಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕೇವಲ 48 ಗಂಟೆಯಲ್ಲಿ ಯಾವುದೇ ಸಮೀಕ್ಷೆಯ ವರದಿ ಇಲ್ಲದೆ, ಹೋರಾಟಗಳಿಲ್ಲದೆ ಮೀಸಲಾತಿ ನೀಡಿಬಿಟ್ರು. ಈಗ ಮೀಸಲಾತಿ ಇಲ್ಲದವರು ಯಾರಾದರೂ ಉಳಿದಿದ್ದಾರಾ? ಹೀಗಾದರೆ ಸಾಮಾಜಿಕವಾಗಿ ಸಮಾನತೆ ಹೇಗೆ ಸಾಧ್ಯ? ಶೋಷಿತ ಜನರಿಗೆ ಸಾಮಾಜಿಕ ನ್ಯಾಯ ಸಿಕ್ಕಂತಾಗುತ್ತಾ?” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

“ಕರಾವಳಿಯಲ್ಲಿ ಗಲಾಟೆ, ಕೊಲೆಗಳು ಆಗಬೇಕಾದರೆ ಶೂದ್ರರ ಹುಡುಗರನ್ನು ಕರೆದುಕೊಂಡು ಬಂದು ಮುಂದೆ ಬಿಡುತ್ತಾರೆ. ಆರ್‌ಎಸ್‌ಎಸ್‌ನ ಒಬ್ಬನಾದ್ರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“1931ರ ನಂತರ ಜಾತಿ ಗಣತಿ ನಡೆದಿಲ್ಲ, ಇದನ್ನು ನಾವು ಮಾಡಿದ್ದೆವು. ಸ್ವಾತಂತ್ರ್ಯ ನಂತರ ಲಂಬಾಣಿ ಜನ, ಕುರುಬರು, ಕುಂಬಾರರು, ಮಡಿವಾಳರು, ಅಲ್ಪಸಂಖ್ಯಾತರು, ಕ್ಷೌರಿಕರು, ದಲಿತರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ, ಪರಿಸ್ಥಿತಿ ಹೇಗಿದೆ ಎಂಬುದು ಗೊತ್ತಾಗಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

“ಪರಿಶಿಷ್ಟ ಜಾತಿಯವರ ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ 17ರಷ್ಟು ಏರಿಕೆ ಮಾಡಿ, ಈ ಶೇ. 17 ಅನ್ನು ಆಧಾರವಾಗಿಟ್ಟುಕೊಂಡು ನಾನಾ ಜಾತಿಗಳಿಗೆ ಶೇ. 6, ಶೇ. 4.5, ಶೇ. 1 ಹೀಗೆ ಲೆಕ್ಕಹಾಕಿದ್ದಾರೆ. ಆದರೆ ಈ ಮೀಸಲಾತಿ ಹೆಚ್ಚಳ ಇನ್ನು ಊರ್ಜಿತವೇ ಆಗಿಲ್ಲ” ಎಂದು ಹೇಳಿದ್ದಾರೆ.

“ಲಂಬಾಣಿಗಳಿಗೆ, ಬೋವಿಗಳಿಗೆ ಶೇ. 4.5 ರಷ್ಟು ಮೀಸಲಾತಿ ಲೆಕ್ಕ ಹಾಕಿದ್ದಾರೆ ಇದಕ್ಕೂ ಮೊದಲು ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕು. ಈ ಬಿಜೆಪಿಯವರು ಜನರ ಹಣೆಗೆ ತುಪ್ಪ ಹಚ್ಚಿದ್ದಾರೆ, ಮೂಗಿಗೆ ಹಚ್ಚಿದ್ದರೆ ವಾಸನೆಯಾದರೂ ಬರುತ್ತಿತ್ತು, ಈಗ ವಾಸನೆಯೂ ಬರುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

“ನಮ್ಮ ಸರ್ಕಾರದ ಕಡೆಯ ಬಜೆಟ್‌ ₹2.02 ಲಕ್ಷ ಕೋಟಿ ಇದ್ದಾ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿಗೆ ನೀಡಿದ್ದ ಅನುದಾನ ₹30,000 ಕೋಟಿ ಇತ್ತು. ಈಗ ಬಜೆಟ್‌ ಗಾತ್ರ ₹3.10 ಲಕ್ಷ ಕೋಟಿ ಇರುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಏಳಿಗೆಗೆ ನೀಡುವ ಅನುದಾನ ಮಾತ್ರ ₹30,000 ಕೋಟಿಯೇ ಇದೆ. ಇದು ನ್ಯಾಯವೋ? ಅನ್ಯಾಯವೋ?” ಎಂದು ಪ್ರಶ್ನಿಸಿದ್ದಾರೆ.

“ನಾವು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದರೆ ಬಿಜೆಪಿಯವರು ಇದನ್ನು ನಂಬಬೇಡಿ, ಅವರಿಂದ 10 ಕೆ.ಜಿ ಕೊಡೋಕಾಗಲ್ಲ ಎನ್ನುತ್ತಾರೆ. ಹಿಂದೆ 7 ಕೆ.ಜಿ ಅಕ್ಕಿ ಕೊಟ್ಟವರಿಗೆ ಈಗ 10 ಕೆ.ಜಿ ಅಕ್ಕಿ ಕೋಡೋಕಾಗಲ್ವಾ?” ಎಂದಿದ್ದಾರೆ.

“ಈ ಯೋಜನೆಗೆ ಎರಡು ಮೂರು ಸಾವಿರ ಕೋಟಿ ಹಣ ಹೆಚ್ಚು ಖರ್ಚಾಗಬಹುದು ಅಷ್ಟೆ. ಬೆಲೆಯೇರಿಕೆ ವಿಪರೀತವಾಗಿದೆ, ಗ್ಯಾಸ್‌ ಬೆಲೆ 2013ರಲ್ಲಿ ₹414 ಇತ್ತು, ಇಂದು ₹1,150 ಆಗಿದೆ, ಇದಕ್ಕಾಗಿ ಪ್ರತೀ ಮನೆಯ ಯಜಮಾನಿಗೆ ತಿಂಗಳಿಗೆ ₹2,000 ನೀಡುತ್ತೇವೆ ಎಂದಿದ್ದೇವೆ, ಇದನ್ನು ಮಾಡಲು ಆಗಲ್ಲ ಎಂದು ಅವರು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ʼಈ ದಿನʼ ಸಮೀಕ್ಷೆ | ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ; ಮೋದಿಯ ನಿಜಮುಖ ಅರಿತ ಜನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ...