ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

Date:

Advertisements
  • ಲಮಾಣಿ ಅವರ ಅನುಭವ, ಸರಳತೆ ಕೊಂಡಾಡಿದ ಸದನದ ಸದಸ್ಯರು
  • ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಅಪಾರ ಅನುಭವ ಹೊಂದಿದ್ದಾರೆ

ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.

ವಿಧಾನಸಭೆಯ ಗುರುವಾರ ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಪ್ರಕಟಿಸಿದರು. ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ಅವರ ಹೆಸರನ್ನು ಸೂಚಿಸಿದರು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿಯ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಮತ್ತು ಸಚಿವರಾಗಿ ಕೆಲಸ ನಿರ್ವಹಿಸಿದ ಅಪಾರ ಅನುಭವ ಹೊಂದಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ ಅವರ ಬಳಿ ತೆರಳಿ ಉಪಸಭಾಧ್ಯಕ್ಷರ ಸ್ಥಾನಕ್ಕೆ ಕರೆದುಕೊಂಡು ಬಂದರು.

Advertisements
Bose Military School

ನಂತರ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಶಾಸಕ ರುದ್ರಪ್ಪ ಲಮಾಣಿ ಅವರು ಸರ್ವಾನುಮತದಿಂದ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1999 ರಿಂದ ವಿಧಾನಸಭೆಗೆ ಬಂದಿರುವ ಅವರು ಮಂತ್ರಿಗಿರಿ ಸೇರಿದಂತೆ ಪಕ್ಷದ ಅನೇಕ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಮತ್ತು ಎಲ್ಲರಿಂದ ಅಜಾತಶತ್ರು ಎಂದು ಹೆಸರು ಗಳಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ರುದ್ರಪ್ಪ ಲಮಾಣಿ ಅವರ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದೇವೆ. ಇವರ ಅವಧಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಲಿ. ಹೊಸ ಹೊಸ ನಾಯಕರನ್ನು ತಯಾರು ಮಾಡಲಿ. ಈ ದೊಡ್ಡ ಸ್ಥಾನವನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಎಲ್ಲರ ಹೃದಯವನ್ನು ಗೆಲ್ಲಲಿ ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನ ಅತ್ಯಂತ ಗೌರವಯುತವಾದ ಸ್ಥಾನ. ತಮ್ಮ ಅವಧಿಯಲ್ಲಿ ನ್ಯಾಯ ಎಲ್ಲರಿಗೂ ಸಿಗಲಿ. ತಮಗೆ ಇನ್ನಷ್ಟು ಉನ್ನತ ಸ್ಥಾನಗಳು ಸಿಗಲಿ ಎಂದರು.

ಹಿರಿಯ ಶಾಸಕ ಟಿ ಬಿ ಜಯಚಂದ್ರ ಸೇರಿದಂತೆ ಅನೇಕ ಶಾಸಕರು ಮಾತನಾಡಿದರು.

ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಇಲ್ಲಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಸಚಿವರಾಗಿ ಕೆಲಸ ಮಾಡಬೇಕು ಎನ್ನುವ ಆಸೆ ಇತ್ತು. ಪಕ್ಷದ ನಿರ್ದೇಶನದ ಅನುಸಾರ ಮತ್ತು ಸದನದ ಎಲ್ಲ ಸದಸ್ಯರು ಪ್ರೀತಿಯಿಂದ ಅವಿರೋಧವಾಗಿ ಉಪಸಭಾಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿ ಎಂದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಪಸಭಾಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ...

ಜ.ನಾ. ತೇಜಶ್ರೀ ಅವರ ‘ಜೀವರತಿ’ | ಮನುಷ್ಯ ಮನಸ್ಸಿಗೆ ಬೇಕಾದ ಒಳ್ಳೆಯತನಗಳತ್ತ…

ಕಳೆದ ಭಾನುವಾರ ಸಾಂಕೇತಿಕವಾಗಿ ಬಿಡುಗಡೆಯಾದ ಜ.ನಾ. ತೇಜಶ್ರೀಯವರ ಮೊದಲ ಕಾದಂಬರಿ 'ಜೀವರತಿ'ಗೆ...

ಮುಂದಿನ ಅಧಿವೇಶನದಲ್ಲಿಯೇ ದ್ವಿಭಾಷಾ ನೀತಿ ಜಾರಿಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ರಾಜ್ಯದಲ್ಲಿ ಹಲವು ವರ್ಷಗಳಿಂದ ರಾಜ್ಯದ ಶಾಲೆಗಳಲ್ಲಿ ನೆನೆಗುದಿಗೆ ಬಿದ್ದಿರುವ ದ್ವಿಭಾಷಾ ನೀತಿಯನ್ನು...

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಡಿಕೆಶಿ ಕಾರ್ಮಿಕ ವಿರೋಧಿ ಹೇಳಿಕೆ: ಎಐಸಿಸಿಟಿಯು ಖಂಡನೆ

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...

Download Eedina App Android / iOS

X