ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಈಶ್ವರ ಖಂಡ್ರೆ ಮಗ ಸಾಗರ್ ಖಂಡ್ರೆ ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ಬುಧವಾರ ನಾಮಪತ್ರ ಸಲ್ಲಿಸಿದರು.
ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಗರ್ ಈಶ್ವರ್ ಖಂಡ್ರೆ ಅವರು ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮತ್ತೊಂದು ನಾಮಪತ್ರ ಪ್ರತಿ ಸಲ್ಲಿಸಿದರು.
ಪರಿಸರ, ಅರಣ್ಯ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, “ಈ ಬಾರಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ನಿಶ್ಚಿತವಾಗಿದೆ. ಕೇಂದ್ರದಲ್ಲಿಯೂ ಈ ಬಾರಿ ಇಂಡಿಯಾ ಒಕ್ಕೂಟದ ನೇತ್ರತ್ವದ ಸರ್ಕಾರ ರಚನೆಯಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!
ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಮಾಜಿ ಶಾಸಕ ಅಶೋಕ್ ಖೇಣಿ ಅವರು ಉಪಸ್ಥಿತರಿದ್ದರು.