ಸರ್ಕಾರಿ ನೌಕರರ ವೇತನ ಪರಿಷ್ಕರಣೆ | 7ನೇ ವೇತನ ಆಯೋಗದ ವರದಿ ಬಳಿಕ ತೀರ್ಮಾನ: ಸಿಎಂ ಭರವಸೆ

Date:

7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಕೋರಿದರು.

ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು.

ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ...

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ...