ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
- Advertisement -
“ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ” ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದರು.
“ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.



