ಚಮಚಾಗಿರಿ ಭಾಷಣದಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್

Date:

ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್ ವಿಶ್ವನಾಥ್ ದೂರಿದರು.

- Advertisement -

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಜಕೀಯ ಮಾತನಾಡುವ ವೇದಿಕೆ ಆದಾಗಿರಲಿಲ್ಲ. ದಸರಾ ಉದ್ಘಾಟಿಸಿದ ಸಾಹಿತಿ ಹಂಪ ನಾಗರಾಜಯ್ಯ ಅವರೂ ರಾಜಕೀಯ ಭಾಷಣ ಮಾಡಿದ್ದಾರೆ. ದಸರಾ ಇತಿಹಾಸ, ಮಹಾರಾಜರ ಕೊಡುಗೆ, ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ” ಎಂದು ಬೇಸರ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಹಿಂದೆ ಚಾಮುಂಡೇಶ್ವರಿಯ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಈಗ ಪದೇ ಪದೇ ಆ ತಾಯಿಯ ಆಶೀರ್ವಾದ ಬೇಡಿದ್ದಾರೆ. ನಾನೇನೂ ತಪ್ಪು ಮಾಡಿಲ್ಲ ಎಂದು ಪುನರುಚ್ಚರಿಸುತ್ತಿದ್ದಾರೆ. ಇದರ ಅರ್ಥವೇನು”ಎಂದು ಪ್ರಶ್ನಿಸಿದರು.

“ಜೆಡಿಎಸ್‌ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ ಟಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಹೊಗಳಿರುವುದು ಬೂಟಾಟಿಕೆ ತರ ಕಾಣುತ್ತಿದೆ. ಅವರೂ ಮುಡಾ ಫಲಾನುಭವಿಯೇ. ಅಷ್ಟೆಲ್ಲ ಹೊಗಳುವ ಅಗತ್ಯ ಇರಲಿಲ್ಲ” ಎಂದರು.

“ಮುಡಾ ಹಗರಣದ ಬಗ್ಗೆ ಇಷ್ಟು ದಿನ ಮಾತನಾಡದ ಜಿಟಿಡಿ ಈಗ ಏಕೆ ಬಾಯಿ ಬಿಟ್ಟಿದ್ದಾರೆ? ಅವರೂ ಮುಡಾ ಫಲಾನುಭವಿ ಆಗಿರುವುದೇ ಇದಕ್ಕೆ ಕಾರಣ. ಅವರದ್ದೂ ಎಷ್ಟೋ‌ ನಿವೇಶನ ಇವೆ ಎಂಬ ಮಾತುಗಳಿವೆ. ಎಲ್ಲ ರಾಜಕಾರಣಿಗಳೂ ಸೇರಿ ಮೈಸೂರನ್ನು ಕಳ್ಳರ ಸಂತೆಯಂತೆ ಬಿಂಬಿಸಿದ್ದಾರೆ” ಎಂದು ಆರೋಪಿಸಿದರು.

“ಜೆಡಿಎಸ್‌ ಶಾಸಕಾಂಗ ‌ಪಕ್ಷದ ನಾಯಕನನ್ನಾಗಿ ಜಿಟಿಡಿ ಅವರನ್ನು ಮಾಡದಿರುವುದು ಅವರ ಕೋಪಕ್ಕೆ ಮತ್ತೊಂದು ಕಾರಣ. ರಾಜ್ಯ ಸರ್ಕಾರವನ್ನು ಬೀಳಿಸುತ್ತೇವೆ ಎಂದು ಯಾರೂ ಹೇಳಿಲ್ಲ. ಆದರೂ ಮುಖ್ಯಮಂತ್ರಿಯೇ ಆ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಮಧ್ಯಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಪತ್ನಿ ಪಾರ್ವತಿಯವರು 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಅಪರಾಧ ಒಪ್ಪಿಕೊಂಡಾಕ್ಷಣ, ಮಾಡಿರುವ ಅಪರಾಧ ಹೋಗಿಬಿಡುವುದಿಲ್ಲ” ಎಂದರು.

“ಮುಡಾದಿಂದ ಶೇ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲ ನಿವೇಶನಗಳ ಬಗ್ಗೆಯೂ ತನಿಖೆ ಆಗಬೇಕು. 14 ನಿವೇಶನಗಳ ಹಂಚಿಕೆ ಪ್ರಕರಣ, ನ್ಯಾಯಾಲಯದ ಆದೇಶದಂತೆ ತನಿಖೆಯ ಹಂತದಲ್ಲಿರುವಾಗಲೇ ನಿವೇಶನಗಳನ್ನು ವಾಪಸ್ ಪಡೆದುಕೊಳ್ಳಲು ಮುಡಾ ಆಯುಕ್ತರಿಗೆ ಅಧಿಕಾರ ಏನಿದೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...