ಸಂದೇಶಖಾಲಿ ಪ್ರಕರಣ | ‘ಬಿಜೆಪಿ ಒತ್ತಡದಿಂದ ದೂರು ನೀಡಿದ್ದೆ’; ಟಿಎಂಸಿ ಕಾರ್ಯಕರ್ತನ ವಿರುದ್ಧದ ಕೇಸ್ ವಾಪಸ್ ಪಡೆದ ಮಹಿಳೆ

Date:

ಸಂದೇಶಖಾಲಿ ಪ್ರಕರಣದಲ್ಲಿ ದೂರು ನೀಡಿದ್ದ ಮೂವರು ಮಹಿಳೆಯರ ಪೈಕಿ ಒಬ್ಬರು ಗುರುವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ದಾಖಲಿಸಿದ್ದ ದೂರನ್ನು ಹಿಂಪಡೆದಿದ್ದಾರೆ.

- Advertisement -

“ಖಾಲಿ ಪೇಪರ್‌ಗಳಿಗೆ ಸಹಿ ಹಾಕಲು ಮತ್ತು ಅತ್ಯಾಚಾರದ ದೂರು ದಾಖಲಿಸಲು ಬಿಜೆಪಿ ನನಗೆ ಒತ್ತಡ ಹೇರಿತ್ತು” ಎಂದು ಮಹಿಳೆ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ?  ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದ ಬಿಜೆಪಿ ನಾಯಕ; ವಿಡಿಯೋ ಹಂಚಿಕೊಂಡ ಟಿಎಂಸಿ

“ಪಿಎಂಎವೈಗೆ ನನ್ನ ಹೆಸರನ್ನು ಸೇರಿಸುವ ನೆಪದಲ್ಲಿ ಅವರು (ಬಿಜೆಪಿ ನಾಯಕರು) ನನ್ನ ಸಹಿಯನ್ನು ಕೇಳಿದರು. ನಂತರ, ಲೈಂಗಿಕ ಕಿರುಕುಳದ ದೂರು ನೀಡಲು ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಮಹಿಳೆ ತಿಳಿಸಿದ್ದಾರೆ.

“ಟಿಎಂಸಿ ಕಚೇರಿಯೊಳಗೆ ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ತಡರಾತ್ರಿ ಪಕ್ಷದ ಕಚೇರಿಗೆ ಬರುವಂತೆ ನನಗೆ ಯಾರೂ ಎಂದಿಗೂ ಒತ್ತಾಯ ಮಾಡಿಲ್ಲ” ಎಂದು ಮಹಿಳೆ ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇನ್ನು ಸುಳ್ಳು ಆರೋಪಗಳನ್ನು ಹಿಂಪಡೆದ ಬಳಿಕ ತನ್ನ ಮೇಲೆ ಬೆದರಿಕೆ ಹಾಕಲಾಗುತ್ತಿದೆ ಮತ್ತು ಸಾಮಾಜಿಕ ಬಹಿಷ್ಕಾರ ಹಾಕುವ ಬೆದರಿಕೆಯಿದೆ ಎಂದು ಉಲ್ಲೇಖಿಸಿ ಸಂದೇಶಖಾಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಹೊಸ ದೂರು ದಾಖಲಿಸಿದ್ದಾರೆ.

ಸಂದೇಶಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಕೈವಾಡವಿದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ ಸ್ಟಿಂಗ್ ಆಪರೇಷನ್ ವಿಡಿಯೋ ಬಹಿರಂಗವಾದ ಬಳಿಕ ಈ ಬೆಳವಣಿಗೆ ಕಂಡುಬಂದಿದೆ.

“ಇಲ್ಲಿ ಯಾವುದೇ ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳಗಳು ನಡೆದಿಲ್ಲ. ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಮಹಿಳೆಯರು ಅಂತಹ ದೂರುಗಳನ್ನು ನೀಡುವಂತೆ ಮನವೊಲಿಸಲಾಗಿದೆ” ಎಂದು ಬಿಜೆಪಿ ನಾಯಕ ಗಂಗಾಧರ್ ಕೋಯಲ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಆದರೆ ಬಿಜೆಪಿ ಮತ್ತು ಗಂಗಾಧರ್ ಕೋಯಲ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇದನ್ನು ಓದಿದ್ದೀರಾ?  ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

ಈ ಹಿಂದೆ ಶಹಜಹಾನ್ ಮತ್ತು ಆತನ ಇಬ್ಬರು ಸಹಾಯಕರು ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದರು. ಈ ಪ್ರಕರಣವನ್ನು ಮುಂದಿಟ್ಟುಕೊಂಡೇ ಸದ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿದಿದೆ. ಸಂದೇಶಖಾಲಿ ಸಂತ್ರಸ್ತೆಗೆ ಬಿಜೆಪಿ ಟಿಕೆಟ್ ಕೂಡಾ ನೀಡಿದೆ.

ಆದರೆ ಈಗ ಸ್ಟಿಂಗ್ ಆಪರೇಷನ್‌ನಿಂದಾಗಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸುವೇಂದು ಅಧಿಕಾರಿ ಮತ್ತು ಇತರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...