ಸಂಡೂರು ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಇದೆ.
ಸಂಡೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಅನ್ನಪೂರ್ಣ ಗೆಲುವಿನ ಮೂಲಕ ಕಾಂಗ್ರೆಸ್ ಇಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದೆ.
ಸಂಡೂರಿನಲ್ಲಿ 16 ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ – 83,368 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರು ಹನಮಂತು – 74,487 ಮತ ಪಡೆದಿದ್ದಾರೆ.
ಮಾಹಿತಿ ಅಪ್‌ಡೇಟ್ ಆಗಲಿದೆ….