ಸರಪಂಚ್ ಹತ್ಯೆ ಪ್ರಕರಣ; ಬಿಜೆಪಿ ಸರ್ಕಾರದ ಸಚಿವ ರಾಜೀನಾಮೆ

Date:

ಮಹಾರಾಷ್ಟ್ರ ಸರ್ಕಾರದ ಸಚಿವ, ಎನ್‌ಸಿಪಿ (ಅಜಿತ್ ಬಣ) ನಾಯಕ ಧನಂಜಯ್ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರಪಂಚ್‌ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿಬಂದ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಕೊಲೆ ಪ್ರಕರಣದ ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ‘ಕೊಲೆ ಪ್ರಕರಣದ ವಿಚಾರವಾಗಿ ಧನಂಜಯ್ ಮುಂಡೆ ರಾಜೀನಾಮೆ ನೀಡಬೇಕಾಗಬಹುದು’ ಎಂದು ಹೇಳಿದ್ದರು. ಇದೀಗ, ಧನಂಜಯ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ತಮ್ಮ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಮೂಲಕ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸಕ್ಕೆ ತಲುಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೀಡ್ ಜಿಲ್ಲೆಯ ಗ್ರಾಮ ಪಂಚಾಯತಿವೊಂದರ ಸರಪಂಚ್ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ಧನಂಜಯ್ ಮುಂಡೆ ಅವರ ಆಪ್ತ ವಾಲ್ಮೀಕ್ ಕರಡ್ ಮತ್ತು ಇತರ ಆರು ಮಂದಿಯನ್ನು ಪೊಲೀಸರು ಜನವರಿಯಲ್ಲಿ ಬಂಧಿಸಿದ್ದರು. ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ-1999 (ಎಂಸಿಒಸಿಎ) ಅಡಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಫೆಬ್ರವರಿ 27ರಂದು 1,200 ಪುಟಗಳ ಜಾರ್ಜ್‌ಶೀಟ್‌ ಸಲ್ಲಿಸಿದ್ದರು. ಈ ಬಳಿಕ, ಧನಂಜಯ್ ರಾಜೀನಾಮೆ ಬಗ್ಗೆ ಚರ್ಚೆಗಳು ಆರಂಭವಾಗಿದ್ದರು.

ಧನಂಜಯ್ ಮುಂಡೆ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೀಡ್ ಜಿಲ್ಲೆಯ ಪಾರ್ಲಿ ಕ್ಷೇತ್ರದಲ್ಲಿ ಎನ್‌ಸಿಪಿ (ಅಜಿತ್ ಬಣ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಅಲ್ಲದೆ, ಬೀಡ್‌ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...