ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯವೇ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

Date:

Advertisements

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ. ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ BBMP ಆಯೋಜಿಸಿದ್ದ ‘ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ಮಹಾತ್ಮ ಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು” ಎಂದು ವಿವರಿಸಿದರು.

“ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ” ಎಂದರು.

Advertisements

“ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ” ಎಂದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X