ಹ್ಯಾಕ್ ವಿಚಾರ | ಕಾಂಗ್ರೆಸ್‌ನವರು ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ: ಸಿ.ಟಿ ರವಿ

Date:

  • ಹ್ಯಾಕ್ ವಿಚಾರ ಪ್ರಸ್ತಾಪಿಸಿದ್ದ ಸಚಿವ ಸತೀಶ್ ಜಾರಕಿಹೊಳಿ
  • ‘ದೇಶ ಗೆಲ್ಲಬೇಕು ಅನ್ನುವವರು ಮೋದಿಯವರನ್ನ ಗೆಲ್ಲಿಸ್ತಾರೆ’

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯ ವೆಬ್‌ಸೈಟ್‌ನ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್‌ನವರು ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

- Advertisement -

ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ಈ ರೀತಿಯಲ್ಲಿಯೂ ಹೇಳಿಕೆಗಳು ಬರಬಹುದು. ನಮ್ಮ‌ ಮೈಂಡ್ ಹ್ಯಾಕ್ ಮಾಡಿದ್ದಾರೆ. ಹಾಗಾಗಿ ಹುಚ್ಚುಚ್ಚು ಹೇಳಿಕೆ ಕೊಡ್ತಿದ್ದೇವೆ ಎಂದು ಹೇಳಲೂಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಧಾನಿ ಮೋದಿಯವರು ನೂರಾರು ಯೋಜನೆ ಕೊಟ್ಟಿದ್ದಾರೆ. ಅವರು ಚುನಾವಣೆಗೆ ಅಂತ ಕೊಡಲಿಲ್ಲ. ಗೆದ್ದ ಮೇಲೆ ಜನರ ಅವಶ್ಯಕತೆ ಗುರುತಿಸಿ ಕೂಡ ಕೊಟ್ಟಿದ್ದಾರೆ. ಕಾಂಗ್ರೆಸ್‌ನವರು ಚುನಾವಣೆಗೆ ಮೊದಲೇ ಡಂಗುರ ಹೊಡೆದರು. ಈಗ ಅವರಿಂದ ಆಗುತ್ತಿಲ್ಲ. ಅದಕ್ಕೆ ಬೇರೆ ಬೇರೆ ಕಾರಣ ಹುಡುಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಅಕ್ಕಿ ವಿಚಾರ ಪ್ರಸ್ತಾಪಿಸಿ ಸಿಎಂ ಅವರನ್ನು ತರಾಟೆಗೈದ ಸಿ.ಟಿ. ರವಿ, ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಕೇಂದ್ರದಲ್ಲಿ ಬಿಜೆಪಿ ಇತ್ತು. ಆದರೆ ಆಗ ಸಿದ್ದರಾಮಯ್ಯ ಮೋದಿ ಅಕ್ಕಿ ಕೊಟ್ಟರು ಅಂತ ಹೇಳಿದ್ರಾ? ಆಗಲೂ‌ ನಾನೇ ಕೊಟ್ಟದ್ದು ಅಂತಾನೇ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ರಾಜ್ಯಗಳಿಗೆ ಕೇಂದ್ರ ಅಕ್ಕಿ ಕೊಟ್ಟಿಲ್ಲ ಅಂತ ಸಚಿವರು ಸ್ಪಷ್ಟಪಡಿಸಿದ್ದಾರೆ. ಗರೀಬಿ ಕಲ್ಯಾಣ್ ಯೋಜನೆಗೆ ಬಳಸಿ ಉಳಿದ್ರೆ ಮಾತ್ರ ಮಾರುಕಟ್ಟೆಗೆ ಬಿಡುಗಡೆ ಮಾಡ್ತೀವಿ ಅಂದಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ದೇಶ ಗೆಲ್ಲಬೇಕು ಅನ್ನುವವರು ಮೋದಿಯವರನ್ನ ಗೆಲ್ಲಿಸ್ತಾರೆ. ದೇಶ ಹಾಳಾಗಬೇಕು ಅನ್ನುವ ತುಕಡೆ ಗ್ಯಾಂಗ್‌ಗಳು ದೇಶದ ಸೋಲನ್ನು ಬಯಸುತ್ತಾರೆ ಎಂದು ಸಿ ಟಿ ರವಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಪಕ್ಷದ ಸೋಲನ್ನು ಒಪ್ಪಿಕೊಳ್ತೇವೆ. ಆದರೆ ಅದು ಹೀನಾಯ ಸೋಲಲ್ಲ. ಯಾಕೆಂದರೆ ನಮ್ಮ ಮತಗಳಿಕೆ ಪ್ರಮಾಣ ಕಡಿಮೆ ಆಗಿ ನಾವು ಅಧಿಕಾರ ಕಳೆದುಕೊಂಡಿಲ್ಲ. 2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆದರೆ ಇದೇ ಜನ ಲೋಕಸಭೆಗೆ ಬಿಜೆಪಿಯನ್ನು ಗೆಲ್ಲಿಸಿದ್ರು. ಆಗಲೂ ಸಿದ್ದರಾಮಯ್ಯ, ಕುಮಾರಸ್ವಾಮಿಯವರು ಬಿಜೆಪಿಯವರು ಒಂದೂ ಸೀಟು ಗೆಲ್ಲುವುದಿಲ್ಲ ಅಂದಿದ್ದರು ಎಂದು ಮಾಜಿ ಶಾಸಕ ಸಿ ಟಿ ರವಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...