ಸತೀಶ್ ಜಾರಕಿಹೊಳಿ- ಕುಮಾರಸ್ವಾಮಿ ಭೇಟಿ ವ್ಯಾಖ್ಯಾನ ಮಾಧ್ಯಮಗಳ ಸೃಷ್ಟಿ:‌ ಡಿಸಿಎಂ ಡಿ ಕೆ ಶಿವಕುಮಾರ್

Date:

ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಬಗ್ಗೆ ನೀವು ಅವರ ಬಳಿಯೇ ಕೇಳಿ. ಅವರು ಮಾತುಕತೆ ನಡೆಸಿರುವ ಬಗ್ಗೆ ನನ್ನನ್ನು ಕೇಳಿದರೆ ನಾನು ಏನು ಹೇಳಲಿ? ಅವರ ಭೇಟಿ ವಿಚಾರವಾಗಿ ನನಗಾಗಲಿ, ಸಿಎಂ ಅವರಿಗಾಗಲಿ ಮಾಹಿತಿ ನೀಡಿಲ್ಲ. ಇಲ್ಲಿ ಪಕ್ಷದ ವಿಚಾರ ಏನೂ ಇರುವುದಿಲ್ಲ. ರಾಷ್ಟ್ರೀಯ ಯೋಜನೆಗಳ ಬಗ್ಗೆ ಚರ್ಚೆ ಮಾಡಿರಬಹುದು. ಅವರಿಗೆ ಗೌರವ ಸಲ್ಲಿಸಲು ಹೋಗಿರಬಹುದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -

ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಮಾಧ್ಯಮಗಳು, “ಈ ಭೇಟಿ ಬಗ್ಗೆ ಅನೇಕ ರೀತಿಯಲ್ಲಿ ವ್ಯಾಖ್ಯಾನ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ನೀವು (ಮಾಧ್ಯಮಗಳು) ವ್ಯಾಖ್ಯಾನ ಮಾಡುತ್ತಿದ್ದೀರಿ. ಬೇರೆ ಇನ್ಯಾವುದೇ ವ್ಯಾಖ್ಯಾನಗಳಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ. ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಹೋರಾಟ ಮಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಆರಂಭಿಸಬೇಕು ಎಂದು ಪ್ರಸ್ತಾಪ ಮಾಡಲಾಗಿತ್ತು. ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಯಚೂರಿನಲ್ಲಿ ಜಾಗ ನೀಡುವುದು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ” ಎಂದು ತಿಳಿಸಿದರು.

“ಕೇಂದ್ರ ಸರ್ಕಾರ ಎಲ್ಲ ವಿಚಾರದಲ್ಲೂ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಾ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿ. ಈ ಬಾರಿ ಬಜೆಟ್‌ನಲ್ಲಿ ಏಮ್ಸ್ ಘೋಷಣೆ ಮಾಡುತ್ತಾರೆ ಎಂದು ಭಾವಿಸಿದ್ದೆವು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ನಮ್ಮ ರಾಜ್ಯಕ್ಕೆ ಏಮ್ಸ್ ನೀಡಲೇಬಾರದು ಎಂದು ಕೇಂದ್ರ ವು ತೀರ್ಮಾನಿಸಿದಂತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಏಮ್ಸ್ ಸ್ಥಾಪಿಸಲು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಸೇರಿದಂತೆ ಎಲ್ಲಾ ಸಹಕಾರವನ್ನು ನೀಡಲಾಗುತ್ತಿದೆ. ಆದರೆ ರಾಯಚೂರಿಗೆ ಏಮ್ಸ್ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧ ಸಂಸತ್ ಸದಸ್ಯರು ಹೋರಾಟಕ್ಕೆ ಮುಂದಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಂಸದರಿಗೆ ಶಕ್ತಿ ತುಂಬಲು ಸರ್ಕಾರ ಕೂಡ ಹೋರಾಟ ಮಾಡಲಿದೆ. ರಾಯಚೂರಿಗೆ ಏಮ್ಸ್ ಘೋಷಣೆ ಮಾಡಬೇಕು ಎಂದು ನಾವು ಈಗಲೂ ಮನವಿ ಮಾಡುತ್ತೇವೆ” ಎಂದು ಹೇಳಿದರು.

ತಮ್ಮ ಮುತ್ತುರತ್ನಗಳನ್ನು ಅವರು ಎಲ್ಲಾದರೂ ಇಟ್ಟುಕೊಳ್ಳಲಿ

ಬಿಜೆಪಿ ಪಕ್ಷದಿಂದ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಅದು ಅವರ ಪಕ್ಷದ ಆಂತರಿಕ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಾವು ಅದರಲ್ಲಿ ಯಾಕೆ ಹಸ್ತಕ್ಷೇಪ ಮಾಡಬೇಕು. ಅವರು ತಮ್ಮ ಮುತ್ತುರತ್ನಗಳನ್ನು ಎಲ್ಲೆಲ್ಲಿ ಇಟ್ಟುಕೊಳ್ಳಬೇಕೋ ಅಲ್ಲಿ ಇಟ್ಟುಕೊಳ್ಳಲಿ” ಎಂದು ಲೇವಡಿ ಮಾಡಿದರು.

ಸಚಿವ ಸಂಪುಟ ಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪವಾಗಲಿದೆಯಂತೆ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ನಾನು ಸಿಎಂ ಅವರಿಗೆ ಕರೆ ಮಾಡಿ ಪಕ್ಷದ ಸಭೆ ಇದೆ ಎಂದು ಹೇಳಿ ದೆಹಲಿಗೆ ಬಂದಿದ್ದೇನೆ” ಎಂದು ತಿಳಿಸಿದರು.

ಒಳಮೀಸಲಾತಿ ಮಧ್ಯಂತರ ವರದಿ ಬಗ್ಗೆ ಕೇಳಿದಾಗ, ” ಈ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಶಾಸಕರು, ಸಚಿವರು ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡುತ್ತಿದ್ದು, ಪಕ್ಷದಲ್ಲಿ ಚರ್ಚೆ ಮಾಡಿದ ನಂತರ ತೀರ್ಮಾನಕ್ಕೆ ಬರಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...