ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

Date:

Advertisements

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್ ಗಳನ್ನು ಹಂಚುತ್ತಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.

“ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್. ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ‌. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ” ಎಂದರು

Advertisements

“ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ‌. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ. ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ” ಎಂದು ಲೇವಡಿ ಮಾಡಿದರು.

“ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದಾರೆ. ಇದರ ವಿರುದ್ದ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ” ಎಂದರು.

ಸಂಸದನೊಬ್ಬ ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದಾಗ “ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ” ಎಂದು ಹೇಳಿದರು.

“ಬಿಜೆಪಿ ಗೊಂದಲದಲ್ಲಿ ಮುಳುಗಿದೆ. ರೈತರು, ತಾಯಂದಿರು, ಯುವ ಸಮುದಾಯ, ಎಲ್ಲಾ ವರ್ಗದ ಜನರು ಹಾಗೂ ದಳ- ಬಿಜೆಪಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ” ಎಂದರು.

ಜೆ.ಪಿ.ನಡ್ಡಾ ಉತ್ತರ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ “ಆಕಾಶದಿಂದ ಯಾರೇ ಕೆಳಗೆ ಉದುರಲಿ ಕಾಂಗ್ರೆಸ್ ಪಕ್ಷಕ್ಕೆ ಏನೂ ಮಾಡಲು ಆಗುವುದಿಲ್ಲ“ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X