ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

Date:

  • ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು
  • 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಕಾಂಗ್ರೆಸ್‌ ಮತ್ತುಎಎಪಿ ಮುಖಂಡರು ಒತ್ತಾಯಿಸಿದ್ದಾರೆ. ಸವದತ್ತಿ ಚುನಾವಣಾಧಿಕಾರಿಗಳ ಕಚೇರಿ ಬಳಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿದೆ.

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ದಿ. ಮಾಮನಿ ಅವರ ಪತ್ನಿ ರತ್ನಾ ಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಇವರು ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಲೋಪದೋಷಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಎಎಪಿ ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ರತ್ನಾ ಮಾಮನಿ ಅವರು 2019ಕ್ಕೂ ಮುಂಚೆ ಇದ್ದಂತ ಫಾರಂ ನಂಬರ್ 29ನ್ನು ಭರ್ತಿ ಮಾಡಿದ್ದಾರೆ. 2019ರ ನಂತರ ಫಾರಂ ಬದಲಾಗಿದೆ. ಹೀಗಾಗಿ, 2018ರ ನಮೂನೆಯಲ್ಲಿ ನಾಮಪತ್ರ ಸಲ್ಲಿಸಿರುವ ರತ್ನ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಉಭಯ ಪಕ್ಷಗಳು ಒತ್ತಾಯಿಸಿವೆ.

ಅಲ್ಲದೆ, ಚುನಾವಣಾ ಅಧಿಕಾರಿಗಳು ಏ.20 ರಂದು ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯವಾದ ಬಳಿಕ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಆದರೆ, ಚುನಾವಣಾ ಅಧಿಕಾರಿಗಳು ಇವರ ನಾಮಪತ್ರವನ್ನು ತಿರಸ್ಕರಿಸದೆ ಹಾಗೇ ಇಟ್ಟುಕೊಂಡಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣವಾಗಿದೆ. ಇದೇ ವಿಷಯವಾಗಿ ಶನಿವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಸಮಯ ನಿಗದಿ ಪಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? : ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಮೂರು ಪಕ್ಷದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಉದ್ವಿಘ್ನ ವಾತಾವರಣ ಉಂಟಾಗಿದೆ. ಚುನಾವಣಾ ಅಧಿಕಾರಿಗಳು ಒಬ್ಬೊಬ್ಬರನ್ನೆ ಒಳಕ್ಕೆ ಕರೆಸಿಕೊಂಡು ಚರ್ಚಿಸುತ್ತಿರುವುದರಿಂದ ಮತ್ತಷ್ಟು ಕುತೂಹಲ ಕೆರಳಿಸಿದೆ.

ಸದ್ಯದ ಮಾಹಿತಿ ಪ್ರಕಾರ ಎಲ್ಲರ ವಿಚಾರಣೆ ಪೂರ್ಣಗೊಂಡಿದ್ದು, ಚುನಾವಣಾ ಅಧಿಕಾರಿಗಳು ಆದೇಶವನ್ನು ಕೆಲವೇ ಕ್ಷಣಗಳಲ್ಲಿ ಹೊರಡಿಸಿರುವುದರಿಂದ ಸವದತ್ತಿ ನಗರದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಇದೇ ವಿಷಯಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ “ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಡವಟ್ಟಾಗಿದೆ. ಆದರೆ, ಮುಖ್ಯಮಂತ್ರಿ ಕಚೇರಿಯಿಂದ ಚುನಾವಣಾಧಿಕಾರಿಗಳಿಗೆ ಒತ್ತಡ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...