ಚುನಾವಣಾ ಬಾಂಡ್ ಮಾಹಿತಿ | ಜೂನ್‌ವರೆಗೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

Date:

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30 ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಕಳೆದ ಫೆಬ್ರವರಿಯಲ್ಲಿ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ (ಇಸಿ) ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸೂಚನೆ ನೀಡಿತ್ತು.

ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸಿದ ಕಾರಣಕ್ಕಾಗಿ ವಿವಾದಾತ್ಮಕ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಸುಪ್ರೀಂ ಕೋರ್ಟ್ ಕೊನೆಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಯೋಜನೆಯು ಅಸಾಂವಿಧಾನಿಕ ಮತ್ತು ಅನಿಯಂತ್ರಿತವಾಗಿದೆ. ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವೆ ಕ್ವಿಡ್ ಪ್ರೊ ಕ್ವೊ ವ್ಯವಸ್ಥೆಗೆ ಕಾರಣವಾಗಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿ‍ಷೇಧದ ವೇಳೆ ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಸ್‌ಬಿಐ ಈ ಬಾಂಡ್‌ಗಳನ್ನು ನೀಡುವುದನ್ನು ನಿಲ್ಲಿಸುವಂತೆ ಮತ್ತು ಈ ಮೋಡ್‌ನಲ್ಲಿ ನೀಡಿದ ದೇಣಿಗೆಗಳ ವಿವರಗಳನ್ನು ಇಸಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಮಾರ್ಚ್ 13ರೊಳಗೆ ಈ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಸಂಸ್ಥೆಗೆ ತಿಳಿಸಿತ್ತು.

“ಕಪ್ಪು ಹಣ ನಿಯಂತ್ರಣಕ್ಕೆ ಚುನಾವಣಾ ಬಾಂಡ್ ಪ್ರಮುಖ ಆಯ್ಕೆಯಲ್ಲ. ಇದು ಅಸಂವಿಧಾನಿಕವಾಗಿದ್ದು, ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತದೆ. ಮುಖ್ಯವಾಹಿನಿಯಲ್ಲಿ ಪ್ರತಿನಿಧಿಸದ ಪಕ್ಷಗಳಿಗೆ ಕೊಡುಗೆ ನೀಡಲಾಗುತ್ತದೆ. ಕೊಡುಗೆಯು ಪಕ್ಷಗಳಿಗೆ ನೀಡುವ ಕೊಂಡು ತೆಗೆದುಕೊಳ್ಳುವ ನಿಯಮದಂತೆ ತೋರಿಸುವುದಿಲ್ಲ.ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ಕೊಟ್ಟವರ ಹೆಸರು ಸಾರ್ವತ್ರಿಕಗೊಳ್ಳುವುದಿಲ್ಲ. ಆದ ಕಾರಣ ಈ ರೀತಿ ದುರುಪಯೋಗವಾಗುವುದಕ್ಕೆ ಸಂವಿಧಾನವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ತಿಳಿಸಿತ್ತು.

ರಾಜಕೀಯ ವ್ಯವಸ್ಥೆಗೆ ಕಪ್ಪುಹಣ ಪ್ರವೇಶಿಸದಂತೆ ತಡೆಯುವ ಉದ್ದೇಶದಿಂದ 2018ರಲ್ಲಿ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪರಿಚಯಿಸಲಾಗಿತ್ತು.

ಈ ಯೋಜನೆ ಜಾರಿಯಾದ ಕೂಡಲೇ ವಿಪಕ್ಷಗಳು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದವು. ಇವುಗಳಲ್ಲಿ ಸಿಪಿಎಂ, ಕಾಂಗ್ರೆಸ್ ನಾಯಕ ಜಯಾ ಠಾಕೂರ್ ಮತ್ತು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ ಕೂಡ ಸೇರಿದ್ದವು.

ನೈಜ ಮುಖ ಅನಾವರಣಗೊಳ್ಳದಿರಲು ಇದು ಮೋದಿಯವರ ಕೊನೆಯ ಪ್ರಯತ್ನ: ರಾಹುಲ್ ಗಾಂಧಿ

ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ ಮಾಡಿರುವ ಪ್ರಯತ್ನದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಲೋಕಸಭಾ ಚುನಾವಣೆಗೂ ಮುನ್ನ ನರೇಂದ್ರ ಮೋದಿಯವರ ನೈಜ ಮುಖ ಮರೆಮಾಚಲು ನಡೆಸುತ್ತಿರುವ ಕೊನೆಯ ಪ್ರಯತ್ನ ಇದು” ಎಂದು ಜರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ಶತಪ್ರಯತ್ನ ನಡೆಸಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿರುವಾಗಲೂ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತದೆ?” ಎಂದು ಪ್ರಶ್ನಿಸಿದ್ದಾರೆ.

“ಮಾಹಿತಿ ನೀಡುವ ಗಡುವು ವಿಸ್ತರಿಸುವಂತೆ ಜೂನ್ 30 ರವರೆಗೆ ಎಸ್‌ಬಿಐ ಸಮಯ ಕೇಳಿದೆ. ಒಂದೇ ಕ್ಲಿಕ್‌ನಲ್ಲಿ ಪಡೆಯಬಹುದಾದ ಮಾಹಿತಿಗಾಗಿ ಇಷ್ಟು ಸಮಯ ಕೇಳುತ್ತಿದೆ ಎಂದರೆ “दाल में कुछ काला नहीं है, पूरी दाल ही काली है” (ಸಾರಿನಲ್ಲಿ ಕಾಳು ಮಾತ್ರ ಕಪ್ಪಲ್ಲ. ಇಡೀ ಸಾರೇ ಕಪ್ಪಾಗಿದೆ) ಎಂದು ತೋರಿಸುತ್ತದೆ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡುವ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ದೇಶದ ಪ್ರತಿಯೊಂದು ಸ್ವತಂತ್ರ ಸಂಸ್ಥೆಗಳು ‘ಮೋದಾನಿ ಕುಟುಂಬ’ ಆಗುವ ಮೂಲಕ ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿವೆ. ಚುನಾವಣೆಗೂ ಮುನ್ನ ನೈಜ ಮುಖ ಮರೆಮಾಚಲು ನಡೆಸುತ್ತಿರುವ ಕೊನೆಯ ಪ್ರಯತ್ನ ಇದು” ಎಂದು ವಯನಾಡ್ ಸಂಸದ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಎ ಅವಧಿಗಿಂತ ಬಿಜೆಪಿ ಅವಧಿಯಲ್ಲಿ 86 ಪಟ್ಟು ಹೆಚ್ಚು ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಯುಪಿಎ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...