ಉತ್ತರ ಪ್ರದೇಶ | ಎನ್‌ಡಿಎ ಮೈತ್ರಿಕೂಟ ಸೇರಿದ ಎಸ್‌ಬಿಎಸ್‌ಪಿ ಮುಖ್ಯಸ್ಥ ಓಂ ಪ್ರಕಾಶ್‌ ರಾಜ್‌ಭರ್

Date:

Advertisements
  • 2017ರಲ್ಲಿ ಉ.ಪ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಓಂ ಪ್ರಕಾಶ್‌ ರಾಜ್‌ಭರ್‌ ಮೈತ್ರಿ
  • 2022ರ ಜುಲೈನಲ್ಲಿ ಎಸ್‌ಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದ ರಾಜ್‌ಭರ್

ಉತ್ತರ ಪ್ರದೇಶ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಸುಹೇಲ್‌ದೇವ್‌ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಓಂ ಪ್ರಕಾಶ್ ರಾಜ್‌ಭರ್‌ ಕೇಂದ್ರ ಸರ್ಕಾರದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿದ್ದಾರೆ.

ಈ ಮೂಲಕ ರಾಜ್‌ಭರ್‌ ಅವರು ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದ (ಎಸ್‌ಪಿ) ಜೊತೆಗಿನ ಮೈತ್ರಿ ಮುರಿದುಕೊಂಡಿದ್ದಾರೆ.

ಓಂ ಪ್ರಕಾಶ್‌ ರಾಜ್‌ಭರ್‌ ಅವರು 2024ರ ಲೋಕಸಭೆ ಚುನಾವಣೆಗೂ ಮುನ್ನ ಎನ್‌ಡಿಎ ಸೇರಿರುವುದು ಉತ್ತರ ಪ್ರದೇಶದ ಮಟ್ಟಿಗೆ ಮಹತ್ವ ಪಡೆದುಕೊಂಡಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಎಸ್‍ಬಿಎಸ್‍ಪಿ ಒಟ್ಟಾಗಿ ಸ್ಪರ್ಧಿಸಿದ್ದವು. ಎರಡೂ ಪಕ್ಷಗಳಿಗೂ ಸಹ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಿತ್ತು.

Advertisements

ಕೆಲವು ದಿನಗಳ ಹಿಂದೆ 20ಕ್ಕೂ ಹೆಚ್ಚು ನಾಯಕರು ರಾಜ್‍ಭರ್ ನೇತೃತ್ವದ ಎಸ್‍ಬಿಎಸ್‍ಪಿ ಪಕ್ಷವನ್ನು ತೊರೆದಿದ್ದರು. ಇವರಲ್ಲಿ ಸಂಸ್ಥಾಪಕ ಸದಸ್ಯ ಮತ್ತು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮಹೇಂದ್ರ ರಾಜ್‍ಭರ್ ಸಹ ಸೇರಿದ್ದರು. ಓಂ ಪ್ರಕಾಶ್ ರಾಜ್‍ಭರ್ ಕೇವಲ ಹಣ ಸಂಗ್ರಹದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿ ಮಹೇಂದ್ರ ರಾಜ್‌ಭರ್ ಆರೋಪಿಸಿದ್ದರು.

ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಎಸ್‌ಬಿಎಸ್‌ಪಿ ನಡುವೆ ಹಲವು ಅಸಮಾಧಾನವಿತ್ತು. ಎಸ್ಬಿಎಸ್ಪಿಯ ಹಲವು ನಾಯಕರು ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು. ಈಗ ಎಸ್‌ಬಿಎಸ್‌ಪಿ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದೆ.

ಓಂ ಪ್ರಕಾಶ್‌ ರಾಜ್‌ಭರ್‌ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಚಿತ್ರವನ್ನು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಎನ್‌ಡಿಎ ಸೇರ್ಪಡೆಯ ಬಗ್ಗೆ ಹೇಳಿದ್ದಾರೆ. ಅಲ್ಲದೆ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಮುಖ್ಯಸ್ಥ ಜೆ ಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

“ಬಿಜೆಪಿ ಮತ್ತು ಎಸ್‌ಬಿಎಸ್‌ಪಿ ಸಾಮಾಜಿಕ ನ್ಯಾಯ, ದೇಶದ ಭದ್ರತೆ ಮತ್ತು ಉತ್ತಮ ಆಡಳಿತದಿಂದ ವಂಚಿತರಾದವರು, ದಮನಿತರು, ಹಿಂದುಳಿದ ವರ್ಗಗಳು, ದಲಿತರು, ಮಹಿಳೆಯರು, ರೈತರು, ಯುವಕರು ಮತ್ತು ಸಮಾಜದ ಎಲ್ಲಾ ದುರ್ಬಲ ವರ್ಗಗಳ -ಸಬಲೀಕರಣಕ್ಕಾಗಿ ಹೋರಾಡುತ್ತವೆ” ಎಂದು ರಾಜ್‌ಭರ್ ಹೇಳಿದ್ದಾರೆ.

“ಓಂ ಪ್ರಕಾಶ್ ರಾಜ್‌ಭರ್ ಅವರ ಆಗಮನವು ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುತ್ತದೆ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್‍ಭರ್ ಅವರು ಬೇರೆ ಪಕ್ಷಗಳ ಜೊತೆ ಮೈತ್ರಿ ಬಯಸಿದ್ದರು. ಜುಲೈ 12 ರಂದು ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯನ್ನು ಭೇಟಿಯಾಗಿದ್ದರು.
ಜು.18ರಂದು ದೆಹಲಿಯಲ್ಲಿ ನಡೆಯಲಿರುವ ಎನ್‍ಡಿಎ ಮೈತ್ರಿಕೂಟದ ಸಭೆಯಲ್ಲಿ ಓಂ ಪ್ರಕಾಶ್ ರಾಜ್‍ಭರ್ ಅವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2024ರ ಲೋಕಸಭೆ ಚುನಾವಣೆಗೂ ಮೊದಲು ಆಡಳಿತ ಪಕ್ಷದ ಶಕ್ತಿಯನ್ನು ತೋರಿಸಲು ಈ ಸಭೆಯನ್ನು ಕರೆಯಲಾಗಿದೆ. ಇದೇ ಸಮಯದಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧದ ಪ್ರತಿಪಕ್ಷಗಳ 2ನೇ ಸಭೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಚಿಕ್ಕಮ್ಮನ ನೋಡಲು ಶರದ್‌ ಪವಾರ್‌ ನಿವಾಸಕ್ಕೆ ಅಜಿತ್‌ ಪವಾರ್‌ ಭೇಟಿ

ಸುಮಾರು 42 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಎಸ್‌ಬಿಎಸ್‌ಪಿ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ರಾಜ್‌ಭರ್ ಅವರು ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟದಲ್ಲಿ 2019 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X