ಮತಗಳವು: ರಾಹುಲ್ ಗಾಂಧಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ದೇಶದ ವಿವಿಧೆಡೆ ಮತಗಳವು ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದ ತನಿಖೆ ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠವು ಪಿಐಎಲ್ ಅನ್ನು ತಿರಸ್ಕರಿಸಿದ್ದು, ಅರ್ಜಿದಾರರು ಬೇರೆ ಅರ್ಜಿ ಸಲ್ಲಿಸಬಹುದು. ಬೇರೆಡೆ ಪರಿಹಾರ ಹುಡುಕಬಹುದು. ಈ ವಿಚಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಇತರೆ ರೀತಿಯಲ್ಲಿ ಪರಿಹಾರವನ್ನು ಪಡೆಯಬಹುದು ಎಂದು ಕೋರ್ಟ್ ಹೇಳಿದೆ. ಈ ಸಂದರ್ಭದಲ್ಲೇ, “ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರೂ ಅದನ್ನು ಪರಿಗಣಿಸಲಾಗಿಲ್ಲ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಕರ್ನಾಟಕದ ಆಳಂದದಲ್ಲಿ 6,000 ಮತಗಳ ‘ಡಿಲೀಟ್’ ಯತ್ನ: ಪುರಾವೆ ಸಹಿತ ವಿವರಿಸಿದ ರಾಹುಲ್ ಗಾಂಧಿ

ಇನ್ನು ಅರ್ಜಿಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸಾವಿರಾರು ನಕಲಿ ಹೆಸರುಗಳಿವೆ. ಇದು ಒಬ್ಬ ವ್ಯಕ್ತಿಗೆ ಒಂದು ಮತದ ಅಧಿಕಾರ ಎಂಬುದಕ್ಕೆ ವಿರುದ್ಧವಾಗಿದೆ. ಕೆಲವರಲ್ಲಿ ಗುರುತಿನ ಚೀಟಿ ಇದ್ದರೂ ಹಲವೆಡೆ ಹೆಸರು ನೋಂದಾವಣಿಯಾಗಿದೆ. ಮಹದೇವಪುರ ಕ್ಷೇತ್ರದಲ್ಲಿಯೇ 40,000ಕ್ಕೂ ಅಧಿಕ ಅನಧಿಕೃತ ಮತದಾರರು, 10,000ಕ್ಕೂ ಅಧಿಕ ನಕಲಿ ದಾಖಲೆಗಳು ಕಂಡುಬಂದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ, ಇದೇ ರೀತಿ ಮಹಾರಾಷ್ಟ್ರದಲ್ಲಿಯೂ ಚುನಾವಣೆ ವೇಳೆ ಅಕ್ರಮಗಳು ನಡೆದಿವೆ ಎಂಬ ಆರೋಪವನ್ನೂ ಅರ್ಜಿಯಲ್ಲಿ ಮಾಡಲಾಗಿದೆ.

ಮಹದೇವಪುರ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿಯನ್ನು ನೀಡಿದ್ದಾರೆ. ಈ ಸಂಬಂಧ ಸಾಕಷ್ಟು ಪುರಾವೆಗಳನ್ನೂ ಬಹಿರಂಗಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತನಿಖೆ ನಡೆಸಿ ವರದಿ ಮಾಡಿದ್ದು, ಈ ಆರೋಪಕ್ಕೆ ಪುಷ್ಠಿ ನೀಡಿದೆ. ಈ ಮತಗಳವಿನ ಬಗ್ಗೆ ಗಂಭೀರ ತನಿಖೆ ನಡೆಯಬೇಕು ಎಂಬ ಆಗ್ರಹ ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...