ಡಿಎಂಕೆ ನಾಯಕನನ್ನು ಸಚಿವರಾಗಿ ನೇಮಿಸಲು ನಕಾರ; ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಚಾಟಿ

Date:

ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ್ದ ರಾಜ್ಯಪಾಲ ಆರ್‌ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ರಾಜ್ಯಪಾಲರ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕೆ ಪೊನ್ಮುಡಿ ಅವರಿಗೆ ಸಚಿವ ಸ್ಥಾನ ನೀಡಲು  ಶಿಫಾರಸು ಮಾಡಿದ್ದರು. ಆದರೆ, ರಾಜ್ಯಪಾಲರು ನೇಮಕಕ್ಕೆ ನಿರಾಕರಿಸಿದ್ದರು. ಗವರ್ನರ್ ನಡೆಯನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಇದನ್ನು ಓದಿದ್ದೀರಾ? ರಾಮೇಶ್ವರ ಕೆಫೆ ಸ್ಪೋಟದ ಬಗ್ಗೆ ಹೇಳಿಕೆ: ತಮಿಳುನಾಡು ಜನರಲ್ಲಿ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿದ್ದ ನ್ಯಾಯಪೀಠ, “ರಾಜ್ಯಾಪಾಲರ ಈ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ. ಸುಪ್ರೀಂ ಕೋರ್ಟ್ಅನ್ನು ರಾಜ್ಯಪಾಲರು ಧಿಕ್ಕರಿಸುತ್ತಿದ್ದಾರೆ. ಸಚಿವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ನಂತರ, ರಾಜ್ಯ ಸಚಿವ ಸಂಪುಟಕ್ಕೆ ಅವರನ್ನು ಮರುನೇಮಕ ಮಾಡುವುದು ‘ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿದೆ’ ಎಂದು ರಾಜ್ಯಪಾಲರು ಹೇಗೆ ಹೇಳುತ್ತಾರೆ” ಎಂದು ಪ್ರಶ್ನಿಸಿದೆ.

ಇತ್ತೀಚೆಗೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪೊನ್ಮುಡಿ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿತ್ತು. ಇದಾದ ಬಳಿಕ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ತಮಿಳುನಾಡು ಸಿಎಂ ಶಿಫಾರಸು ಮಾಡಿದ್ದರು. ಆದರೆ,  ಶಿಫಾರಸನ್ನು ನಿರಾಕರಿಸಿದ್ದ ರಾಜ್ಯಪಾಲ ಆರ್‌ ಎನ್ ರವಿ, ‘ಇದು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿದೆ’ ಎಂದು ಹೇಳಿದ್ದರು.

ಪೊನ್ಮುಡಿ ನೇಮಕ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, “ಪೊನ್ಮುಡಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಪೊನ್ಮುಡಿ ಅವರಿಗೆ ಶಿಕ್ಷೆಯನ್ನು ಅಮಾನತು ಮಾಡಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆಯಷ್ಟೇ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...