ಶಾಲಾ ಪಠ್ಯ ಪರಿಷ್ಕರಣೆ : ಅಧಿವೇಶನಕ್ಕೂ ಮುನ್ನ ಸಭೆ ಕರೆದು ಚರ್ಚಿಸಲು ಬಿಜೆಪಿ ನಿರ್ಧಾರ

Date:

Advertisements
  • ಶಾಲಾ ಪಠ್ಯ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ರಾಜ್ಯ ಬಿಜೆಪಿ
  • ಶಿಕ್ಷಣ ಕ್ಷೇತ್ರ ಪೂರ್ವಗ್ರಹ ಪೀಡಿತ ಮನಸ್ಥಿತಿಯಿಂದ ಹೊರ ಬರಬೇಕು

ಶಾಲಾ ಮಕ್ಕಳ ಪಠ್ಯ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮದ ಕುರಿತಂತೆ ಚರ್ಚಿಸಲು ಶಿಕ್ಷಣ ಕ್ಷೇತ್ರ ಪ್ರತಿನಿಧಿತ ವಿಧಾನಪರಿಷತ್ ಸದಸ್ಯರು ಮತ್ತು ಶಿಕ್ಷಣ ಆಸಕ್ತರ ಎಂಎಲ್ಎಗಳ ಸಭೆಯನ್ನು ಬಿಜೆಪಿ ಆಯೋಜಿಸಿತ್ತು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಇಂದು ನಡೆದ ಸಭೆಯಲ್ಲಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರವು ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದರ ಬಗ್ಗೆ ಚರ್ಚಿಸಲಾಯಿತು. ಜುಲೈನಲ್ಲಿ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನ ಸಭೆ ನಡೆಸಲು ಮುಂದಿನ ಕಾರ್ಯಯೋಜನೆ ರೂಪಿಸುವುದರ ಕುರಿತು ತೀರ್ಮಾನಿಸಲಾಯಿತು.

ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಸಿ ಟಿ ರವಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಗ್ರಹ ಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆಯು ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದರು.

Advertisements

ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ. ಶಿಕ್ಷಣ ಕ್ಷೇತ್ರವು ಪೂರ್ವಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂದು ಅವರು, ಸಮಾನಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ?:ಧಮ್ಮು, ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡವರ ಹೆಸರು ಹೇಳಿ: ಸಿ ಟಿ ರವಿಗೆ ಕಾಂಗ್ರೆಸ್ ಸವಾಲು

ಇನ್ನು ಇದೇ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಬಿ ಸಿ ನಾಗೇಶ್, ಪಠ್ಯ ವಿಚಾರದಲ್ಲಿ ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಎನ್‌ಸಿಆರ್‌ಟಿ ಸೂಚನೆ ಮೇರೆಗೆ ನಾವು ಹಿಂದೆ ಪಠ್ಯ ಬದಲಾವಣೆ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದ ಅವರು, ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಅದನ್ನು ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ ಎಂದರು.

ಇವರು ಬದಲಾವಣೆ ಮಾಡಲೇ ಬೇಕೆಂದಿದ್ದರೆ, ಅದನ್ನು ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ನಾಗೇಶ್ ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X