ಠೇವಣಿ ಹಣ ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ: ಸಿದ್ದರಾಮಯ್ಯ

Date:

Advertisements
  • ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಗಬೇಕು
  • ಜೀರೋ ಪರ್ಸೆಂಟ್ ಸಾಲ 5 ಲಕ್ಷದವರೆಗೂ ಏರಿಕೆ: ಸಿಎಂ

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರದಲ್ಲಿ ಸೋಮವಾರ ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, “ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ” ಎಂದರು.

“ಸರ್ಕಾರ ಒಂದು ವರ್ಷಕ್ಕೆ 1,200 ಕೋಟಿ ರೂ.ಗಳನ್ನು ಹಾಲು ನೀಡುವ ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರೆಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು” ಎಂದರು.

Advertisements

“ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ಬರಗಾಲ ಸಮರ್ಥವಾಗಿ ನಿಭಾಯಿಸುತ್ತೇವೆ

“12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದು ಡಿಸಿ, ಸಿಇಒಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ” ಎಂದರು.

ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ

“ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು. ಇಂದು ರಾಜ್ಯದಲ್ಲಿ 45,600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ” ಎಂದರು ಹೇಳಿದರು.

ದಲಿತರು, ಮಹಿಳೆಯರು ಸಹಕಾರಿ ಸದಸ್ಯರಾಗಲು ಪ್ರೋತ್ಸಾಹ

“ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X