ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆ ಅನುದಾನ ದುರ್ಬಳಕೆಗೆ ಅವಕಾಶ ನೀಡಲ್ಲ: ಸಚಿವ ಮಹದೇವಪ್ಪ

Date:

  • ಛಲವಾದಿ ಟಿ ನಾರಾಯಣಸ್ವಾಮಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರ ಉತ್ತರ
  • ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಕೈಬಿಡಲು ನಿರ್ಧಾರ

ರಾಜ್ಯ ಸರ್ಕಾರವು ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆ 62 (562)ಕ್ಕೆ ಉತ್ತರಿಸಿದರು.

“ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮ 2013 ಮತ್ತು ನಿಯಮಗಳು 2017 ರಲ್ಲಿ ಪ.ಜಾತಿ ಮತ್ತು ಪಂಗಡದ ಜನರಿಗೆ ನೇರವಾಗಿ ಪ್ರಯೋಜನವಾಗುವ ಕಾರ್ಯಕ್ರಮಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಹಂಚಿಕೆ ಮಾಡಿ ಅನುಷ್ಠಾನಗೊಳಿಸಲು ಅವಕಾಶವಿದ್ದು ಈ ಅನುದಾನವನ್ನು ಯಾವುದೇ ಸಂದರ್ಭದಲ್ಲೂ ಅನ್ಯ ಉದ್ದೇಶಕ್ಕಾಗಿ ಬಳಸುವುದಿಲ್ಲ ಹಾಗೂ ಕಾಯ್ದೆಯ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಗ್ಯಾರಂಟಿ ಯೋಜನೆಗಳಿಗಾಗಿ, ಗೃಹಲಕ್ಷ್ಮೀ ಯೋಜನೆಗೆ 5075 ಕೋಟಿ ರೂ, ಅನ್ನಬಾಗ್ಯ ಯೋಜನೆಗೆ 2779.50 ಕೋಟಿ ರೂ, ಗೃಹಜ್ಯೋತಿ ಯೋಜನೆಯಡಿ 2410 ಕೋಟಿ ರೂ, ಶಕ್ತಿ ಯೋಜನೆಗೆ 812 ಕೋಟಿ ರೂ, ಯುವನಿಧಿ ಯೋಜನೆಗೆ 67.50 ಕೋಟಿ ರೂ ಒದಗಿಸಲಾಗಿದ್ದು, ಈ ಮೊತ್ತವನ್ನು ಪ.ಜಾತಿ/ಪಂಗಡದವರಿಗೆ ಉಪಯೋಗಿಸುತ್ತಿರುವುದರಿಂದ ಸದರಿ ಅನುದಾನದ ದುರ್ಬಳಕೆ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ತಿಳಿಸಿದರು.

“ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನದಲ್ಲಿ ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಯನ್ನು ಕೈಬಿಡಲು ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸಚಿವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಪ.ಜಾತಿ ಮತ್ತು ಪ.ವರ್ಗಗಳ ಕಲ್ಯಾಣಕ್ಕಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಲ್ಲಿ 2023-24 ನೇ ಸಾಲಿನಲ್ಲಿ 11 ಸಾವಿರಕ್ಕೂ ಅಧಿಕ ಮೊತ್ತವನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ ಎಂಬ ವಿಧಾನಪರಿಷತ್ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಪೂರಕವಾಗಿ ಸದಸ್ಯರಾದ ತೇಜಸ್ವಿನಿಗೌಡ, ಭೋಜೇಗೌಡ, ಕೋಟ ಶ್ರೀನಿವಾಸ ಪೂಜಾರಿ, ತಿಪ್ಪೇಸ್ವಾಮಿ, ಶಾಂತಾರಾಮ್, ರವಿಕುಮಾರ್ ದನಿಗೂಡಿಸಿದರು.

ಸರ್ಕಾರದ ಉತ್ತರದ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ಸದಸ್ಯರು ಸದನದ ಬಾವಿಗಳಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸದನವನ್ನು 2 ಬಾರಿ 10 ನಿಮಿಷಗಳ ಕಾಲ ಮುಂದೂಡಲಾಯಿತು. ಅಂತಿಮವಾಗಿ ಈ ಕುರಿತು ಸೋಮವಾರ ಅರ್ಧ ಗಂಟೆಯ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿಗಳು ಅನುಮತಿ ನೀಡುವ ಮೂಲಕ ವಿರೋಧಪಕ್ಷಗಳ ಪ್ರತಿಭಟನೆಯನ್ನು ತಣ್ಣಗಾಗಿಸಿದರು.

ಸರ್ಕಾರದ ಪರವಾಗಿ ಸಚಿವ ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ ಮಾತನಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...

ನೇಹಾ ಕೊಲೆ ಪ್ರಕರಣ | ಸಿಐಡಿ ತನಿಖೆ ಆರಂಭ; ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ...