ಎಸ್.ಸಿ.ಎಸ್.ಪಿ/ಟಿ.ಎಸ್.ಪಿ | ಆಯಾ ವರ್ಷದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು: ಸಚಿವ ಮಹದೇವಪ್ಪ

Date:

Advertisements

ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ನೋಡಲ್ ಏಜೆನ್ಸಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಶೇ.24 ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನರ ಏಳಿಗೆಗಾಗಿ ಕಾಯ್ದೆಯ ರೂಪದಲ್ಲಿ ಕಲ್ಪಿಸಲಾದ ಅನುದಾನದ ಬಳಕೆಯಿಂದ ಅವರ ಬದುಕಿನಲ್ಲಿ ಉಂಟಾದ ಧನಾತ್ಮಕ ಬದಲಾವಣೆಯ ಕುರಿತಾಗಿ ಮೌಲ್ಯಮಾಪನ ವರದಿಯನ್ನು ನೀಡುವಂತೆ ಹಾಗೂ ನೀಡಲ್ಪಟ್ಟ ಇಲಾಖಾವಾರು ಅನುದಾನದಿಂದ ಎಷ್ಟು ಮಂದಿಗೆ ಪ್ರಯೋಜನ ಆಗಿದೆ ಎಂಬ ಅಂಕಿ ಅಂಶವನ್ನು ನೀಡಬೇಕೆಂದು ಸಚಿವರು ಕಟ್ಟುನಿಟ್ಟಿನ ಸಲಹೆ ನೀಡಿದರು.

ಸುದೀರ್ಘ 6 ಗಂಟೆಗಳ ಕಾಲ ಜರುಗಿದ ಈ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾರ್ಯಕ್ರಮದಡಿ ಇರುವ ಪರಿಣಾಮಕಾರಿಯಾಗಿ ತಲುಪಿಸಿ ಆ ಕುರಿತು ಸರಿಯಾದ ವರದಿಯನ್ನು ನೀಡುವಂತೆಯೂ ಸಚಿವರು ಆದೇಶ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

Advertisements
Bose Military School

ನೋಡಲ್ ಸಭೆಗಳ ನಂತರ ಎಲ್ಲರೂ ಮತ್ತೊಂದು ಸಭೆಯಲ್ಲಿ ಕೇವಲ ಸ್ಪಷ್ಟನೆ ನೀಡದೇ ಕೆಲಸಗಳ ಮೂಲಕ ಬಡವರಿಗೆ ಸಹಾಯ ಮಾಡಬೇಕು. ಅಧಿಕಾರಿಗಳೆಂದರೆ ಸರ್ಕಾರ ಮತ್ತು ಜನರ ನಡುವೆ ಸೇತುವೆ ಆಗಿದ್ದು ತಮ್ಮ ಸ್ಥಾನದ ಮಹತ್ವವನ್ನು ಅವರು ಅರಿಯಬೇಕು ಎಂದು ತಿಳಿಸಿದರು.

ಈ ಮಹತ್ವದ ಸಭೆಯಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ನೋಡಲ್ ಏಜೆನ್ಸಿ ಸಲಹೆಗಾರರು, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ಎಸ್.ಸಿ.ಎಸ್.ಪಿ/ಟಿ‌.ಎಸ್‌.ಪಿ ನಿರ್ದೇಶಕರು ಹಾಗೂ ಅಧಿಕಾರಿಗಳು ಸೇರಿದಂತೆ, ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಚುನಾವಣೆ | ಎಎಪಿ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಜೊತೆ ಮೈತ್ರಿ ನಿರಾಕರಿಸಿದ ಕೇಜ್ರಿವಾಲ್

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ...

ಚೀನಾದಿಂದ ರಸಗೊಬ್ಬರ ಪೂರೈಕೆ ಸ್ಥಗಿತ, ಮೇಕ್ ಇನ್ ಇಂಡಿಯಾ- ಆತ್ಮನಿರ್ಭರ ಭಾರತ ವಿಫಲ: ಮಲ್ಲಿಕಾರ್ಜುನ ಖರ್ಗೆ

ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ...

ಕೆ ಆರ್ ಪೇಟೆ | ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿಗಿಳಿದ ಕರ್ನಾಟಕ ಪಬ್ಲಿಕ್‌ ಶಾಲೆ; ಉಲ್ಲಂಘನೆಯಾಯಿತೇ ಶಿಕ್ಷಣದ ಹಕ್ಕು?

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅನಗತ್ಯ ದಾಖಲಾತಿಗಳನ್ನು ಮಾಡಿಕೊಂಡಿದ್ದು, ಪೋಷಕರಿಂದ ವಂತಿಗೆಯ ಹೆಸರಿನಲ್ಲಿ...

ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ...

Download Eedina App Android / iOS

X