ರಾಜ್ಯ ಸರ್ಕಾರದಿಂದ ಎಸ್‌ಡಿಪಿಐ ಕಚೇರಿಗಳ ಜಪ್ತಿ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Date:

  • ನ್ಯಾ. ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಿಂದ ವಿಚಾರಣೆ
  • ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಲ್ಲಿಸಿರುವ ಅರ್ಜಿ

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾಗೆ) ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

- Advertisement -

ರಾಜ್ಯ ಸರ್ಕಾರದ ಧೋರಣೆ ಮತ್ತು ನಿರ್ಧಾರವನ್ನು ಪ್ರಶ್ನಿಸಿ ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, “ರಾಜ್ಯ ಸರ್ಕಾರವು ಯಾವುದೇ ಮಾಹಿತಿ ನೀಡದೇ ರಾಜ್ಯದ ಹಲವು ಕಡೆ ಎಸ್‌ಡಿಪಿಐ ಕಚೇರಿಗಳು ಹಾಗೂ ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಗಳಿಗೆ ಬೀಗ ಹಾಕಿದ್ದಾರೆ. ಎಸ್‌ಡಿಪಿಐನ ಜನಪ್ರತಿನಿಧಿಗಳಿಗೆ ರಾಜಕೀಯ ಚಟುವಟಿಕೆ ನಡೆಸಲು ಕಚೇರಿಯ ಅಗತ್ಯವಿದೆ. ಆದ್ದರಿಂದ, ರಾಜ್ಯ ಸರ್ಕಾರವು ಜಪ್ತಿ ಮಾಡಿರುವ ಕಚೇರಿಗಳನ್ನು ತೆರವು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಬೇಕು” ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್, “ರಾಜ್ಯದ ಕೆಲವು ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಮತ್ತು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ) ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಬಗ್ಗೆ ಖಚಿತ ಮಾಹಿತಿ ಇತ್ತು. ಇದನ್ನು ಆಧರಿಸಿದ ಜಿಲ್ಲಾಧಿಕಾರಿಗಳು ಮಾಹಿತಿ ತರಿಸಿಕೊಂಡು ಪರೀಶಿಲಿಸಿದ್ದರು. ಅಕ್ರಮ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ದೃಢಪಡಿಸಿಕೊಂಡ ನಂತರ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ” ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? : ಕೇಂದ್ರ ಸಚಿವ ಅನುರಾಗ್ ಠಾಕೂರ್‌ ವಿರುದ್ಧ ಎಫ್‌ಐಆರ್‌ ರದ್ದು; ದೆಹಲಿ ಪೊಲೀಸ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರದ ಪರ ವಾದಿ ಮಂಡಿಸಿದ ಸಹಾಯಕ ಸಾಲಿಸಿಟರ್‌ ಜರನಲ್‌ ಎಚ್‌ ಶಾಂತಿಭೂಷಣ್, “ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿದೆ. ಇದರ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ಗುಪ್ತಚರ ಮಾಹಿತಿಯನ್ನು ಆಧರಿಸಿ ಎಸ್‌ಡಿಪಿಐ ಕಚೇರಿಗಳಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿ, ಕಾನೂನು ರೀತಿಯ ಕ್ರಮ ಜರುಗಿಸಿದೆ” ಎಂದರು.

ಅರ್ಜಿದಾರರು ಒಂದು ವೇಳೆ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಬೇಕೆಂದಿದ್ದರೆ, ಅದನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಹೇಳಿದರು.

ಮೂರು ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶವನ್ನು ಕಾಯ್ದಿರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...