ಸರಕು ಮತ್ತು ಸೇವೆಗಳ ತೆರಿಗೆ 2024ವಿಧೇಯಕಕ್ಕೆ ಎರಡನೇ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

Date:

ತೆರಿಗೆದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

- Advertisement -

ಸೋಮವಾರ ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ. ಕಳೆದ ನಾಲ್ಕೈದು ವರ್ಷಗಳ ಅನುಭವದಲ್ಲಿ ಎಲ್ಲೆಲ್ಲಿ ಕಾನೂನುಗಳ ಅಗತ್ಯ ಇದೆ ಅದನ್ನು ಅನುಭವದ ಆಧಾರದಲ್ಲಿ ಗುರುತಿಸಲಾಗಿದೆ. ಹಾಗೂ ಕೆಲವು ವಿಚಾರಗಳನ್ನು ವ್ಯಾಕ್ಯಾನ ಮಾಡುವಾಗ ಒಂದಕ್ಕೊಂದು ತದ್ವಿರುದ್ಧವಾಗಿದ್ದ ವಿಚಾರಗಳನ್ನು ಸರಳೀಕರಣಗೊಳಿಸುವ ಕೆಲಸ ಈ ತಿದ್ದುಪಡಿಯಲ್ಲಿ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ತಿದ್ದುಪಡಿಯಿಂದ ಖಜಾನೆಗೆ 15,000 ತೆರಿಗೆ ಸಾಧ್ಯತೆ!

“ಸರ್ಕಾರ ಹಾಗೂ ತೆರಿಗೆದಾರರ ನಡುವೆ 80,000 ಸಾವಿರ ವ್ಯಾಜ್ಯ ಪ್ರಕರಣಗಳಿಗೆ. ಇಷ್ಟು ಪ್ರಕರಣಗಳ ಕಾರಣದಿಂದ ರೂ.15,000 ಕೋಟಿ ತಕರಾರಿನಲ್ಲಿದೆ. ಈಗಿನ ತಿದ್ದುಪಡಿಯಿಂದ ಎಲ್ಲಾ ಪ್ರಕರಣಗಳೂ ಇತ್ಯರ್ಥವಾದರೆ ಖಜಾನೆಗೆ ರೂ.15,000 ಕೋಟಿ ಹಣ ಹರಿದು ಬರುವ ಸಾಧ್ಯತೆ ಇದೆ” ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

“ಅಧಿಕಾರಿಗಳ ಹಾಗೂ ತೆರಿಗೆ ಪಾವತಿದಾರರ ನಡುವೆ ಒಪ್ಪಂದಕ್ಕೆ ಬರದೆ ನಾವು ಅವರು ಎದುರು-ಬದುರು ಪ್ರಕರಣಗಳನ್ನು ನಡೆಸುವಂತಾಗಿದೆ. ಸುಮಾರು 80,000 ವ್ಯಾಜ್ಯ ಪ್ರಕರಣ ನ್ಯಾಯಾಲಯಗಳಲ್ಲಿವೆ. ಆರಂಭದಿಂದಲೂ ಕಾನೂನಲ್ಲಿ ಅವರೊಂತರಾ ವ್ಯಾಖ್ಯಾನ ಮಾಡಿದ್ದಾರೆ, ನಾವೊಂತರಾ ವ್ಯಾಖ್ಯಾನ ಮಾಡಿದ್ದೇವೆ. ಈ ಎಲ್ಲಾ ಪ್ರಕರಣಗಳೂ ಕಾನೂನು ಪ್ರಕ್ರಿಯೆಯಲ್ಲಿರುವ ಕಾರಣ ಬರುತ್ತಿರುವ ತೆರಿಗೆ ಸಹ ನಿಂತುಹೋಗಿದೆ” ಎಂದು ವಿಷಾದಿಸಿದರು.

ಮುಂದುವರಿದು, “ಈ ಹಿಂದೆ ವ್ಯಾಟ್‌ ಪದ್ಧತಿ (ಮೌಲ್ಯ ವರ್ಧಿತ ತೆರಿಗೆ) ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಂದಿನ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ವ್ಯಾಟ್‌ ಬಗೆಗಿನ ವ್ಯಾಜ್ಯಗಳ ಇತ್ಯರ್ಥಕ್ಕೆ ಒನ್‌ ಟೈಮ್‌ ಸೆಟಲ್ಮೆಂಟ್‌ಗೆ ಅವಕಾಶ ಕೊಟ್ಟಿದ್ದರು. ಪ್ರಸ್ತುತ ಇದೇ ಮಾದರಿಯನ್ನು ಮುಂದುವರೆಸಲು ನಿರ್ಧರಿಸಲಾಗಿದೆ. 80,000 ಪ್ರಕರಣಗಳಿಗೆ ಒನ್‌ಟೈಮ್‌ ಅವಕಾಶ ಮಾಡಿಕೊಡಲಾಗುತ್ತಿದೆ. ಈಗಲೇ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡರೆ ಬಡ್ಡಿ ಹಾಗೂ ಪೆನಾಲ್ಟಿ ಹೊರತುಪಡಿಸಿ ಮೂಲ ಹಣ ಪಾವತಿ ಮಾಡಿದರೆ ಸಾಕು. 80,000 ಪ್ರಕರಣಗಳಿಂದ ರೂ.15,000 ಕೋಟಿ ಹಣ ತಕರಾರಿನಲ್ಲಿದೆ. ಈ ಸೆಟಲ್‌ಮೆಂಟ್‌ಗೆ ಅವಕಾಶ ನೀಡಿದರೆ, ಹಲವರು ಮುಂದೆ ಬರಬಹುದು. ಇದರಿಂದ ಸರ್ಕಾರದ ಖಜಾನೆಗೆ ಒಂದಷ್ಟು ಹಣ ಹರಿದುಬರಲಿದೆ” ಎಂದರು.

“ತೆರಿಗೆದಾರರು ಜಿಎಸ್‌ಟಿ ಟ್ರಿಬ್ಯೂನಲ್‌ನಲ್ಲಿ ಪ್ರಕರಣ ದಾಖಲಿಸುವಾಗ ಭದ್ರತಾ ಠೇವಣಿ ರೂಪದಲ್ಲಿ ರೂ.50 ಕೋಟಿ ಹಣ ಠೇವಣಿ ಇಡಬೇಕು. ತೆರಿಗೆದಾರರ ಪಾಲಿಗೆ ಇದು ದೊಡ್ಡ ಹೊರೆ. ಹೀಗಾಗಿ ಈ ಪ್ರಮಾಣವನ್ನು ರೂ.20 ಕೋಟಿಗೆ ಇಳಿಸಬೇಕು ಎಂದು ಹಲವು ವ್ಯವಹಾರಸ್ಥರು ನನ್ನ ಬಳಿ ಕೇಳಿಕೊಂಡಿದ್ದರು. ಅದರಂತೆ ಇದೀಗ ಭದ್ರತಾ ಠೇವಣಿ ಹಣವನ್ನು ರೂ.20 ಕೋಟಿ ರೂಪಾಯಿಗೆ ಉಳಿಸಲಾಗಿದೆ. ಇಲ್ಲದಿದ್ದರೆ, ತೆರಿಗೆದಾರರು ಸುಪ್ರೀಂ ಕೋರ್ಟ್‌ಗೆ ಹೋಗ್ತಾರೆ . ಇದರಿಂದ ಸರ್ಕಾರಕ್ಕೂ ಕಷ್ಟ, ತೆರಿಗೆದಾರರಿಗೂ ಕಷ್ಟ” ಎಂದು ವಿವರಿಸಿದರು.

“ಈ ಕಾನೂನುಗಳನ್ನು ಸರಳೀಕರಿಸುವ ಸಂಬಂಧ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಎಲ್ಲಾ ರಾಜ್ಯಗಳೂ ಒಪ್ಪಿಗೆ ಸೂಚಿಸಿವೆ. ಅಕ್ಟೋಬರ್‌.01 ರಿಂದಲೇ ಜಾರಿ ಮಾಡಲೂ ಸಹ ಎಲ್ಲಾ ರಾಜ್ಯಗಳೂ ಸಮ್ಮತಿಸಿವೆ. ಕರ್ನಾಟಕದಲ್ಲಿ ಅದಕ್ಕೂ ಮೊದಲೇ ಜಾರಿಗೆ ತರಲಾಗಿದೆ. ಕ್ಯಾಬಿನೆಟ್‌ ಅನುಮತಿ ಪಡೆದು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಸುಗ್ರೀವಾಜ್ಞೆ ಮೂಲಕ ಈ ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಪ್ರಸ್ತುತ ಸದನದಲ್ಲಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ತಿಳಿಸಿದರು.

ಸ್ಪಿರಿಟ್‌ ಮೇಲಿಲ್ಲ ಜಿಎಸ್‌ಟಿ..!

“ಮದ್ಯ ಮಾಡಲು ಉಪಯೋಗವಾಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ತಕರಾರು ಈ ಹಿಂದಿನಿಂದಲೂ ಇತ್ತು. ಆದರೆ, ಇದೀಗ ಸ್ಪಿರಿಟ್‌ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಸ್ಪಿರಿಟ್‌ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕುತ್ತಿದ್ದೇವೆ” ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ಖಚಿತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....