ಆಯ್ದ 10 ಗ್ರಾ.ಪಂ. ಅರಿವು ಕೇಂದ್ರಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಕಾರ್ನರ್ ಕಾರ್ಯಕ್ರಮ: ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಬೆಂಗಳೂರಿನಲ್ಲಿ ʼಬ್ರಿಟಿಷ್ ಕೌನ್ಸಿಲ್ ಕಾರ್ನರ್ʼಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, “ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳಿಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ನಮ್ಮ ಅರಿವು ಕೇಂದ್ರಗಳನ್ನು ಸಬಲೀಕರಣಗೊಳಿಸುತ್ತೇವೆ” ಎಂದು ಹೇಳಿದರು.

“ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶ ನಮ್ಮದು. ಬ್ರಿಟಿಷ್ ಕೌನ್ಸಿಲ್‌ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳಿಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಮೂಲಕ ಕಲಿಕೆಯನ್ನು ಪ್ರೇರೇಪಿಸುವ, ಕೌಶಲ್ಯಗಳನ್ನು ಬೆಳೆಸುವ ಮತ್ತು ದೊಡ್ಡ ಅವಕಾಶಗಳಿಗೆ ಬಾಗಿಲು ತೆರೆಯುವ ನಿಟ್ಟಿನಲ್ಲಿ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ” ಎಂದು ತಿಳಿಸಿದರು.

Advertisements

ರಾಜ್ಯದ 10 ಗ್ರಾಮ ಪಂಚಾಯತಿಗಳಲ್ಲಿ ಅರಿವು ಕೇಂದ್ರ

“ಶೈಕ್ಷಣಿಕ ಅವಕಾಶಗಳು ಮತ್ತು ಸಾಂಸ್ಕೃತಿಕ ಸಂಬಂಧಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಯುನೈಟೆಡ್ ಕಿಂಗ್ಡಮ್ ನ ಅಂತಾರಾಷ್ಟ್ರೀಯ ಸಂಸ್ಥೆಯಾದ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯು ಅರಿವು ಕೇಂದ್ರಗಳ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಇಂಗ್ಲಿಷ್ ಭಾಷಾ ಕಲಿಕೆಗೆ ಅವಕಾಶವನ್ನು ಕಲ್ಪಿಸಲು ಮುಂದಾಗಿದೆ. ಒಡಂಬಡಿಕೆಯನ್ವಯ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯಿಂದ ರಾಜ್ಯದ ಆಯ್ದ 10 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ 500 ಮಕ್ಕಳ ಪುಸ್ತಕಗಳನ್ನು ಒದಗಿಸುವುದರ ಮೂಲಕ ಗ್ರಾಮೀಣ ಅರಿವು ಕೇಂದ್ರಗಳಲ್ಲಿ ಭೌತಿಕವಾಗಿ ಪುಸ್ತಕ ಸಂಗ್ರಹದ ವಿಸ್ತರಣೆ ಜೊತೆಗೆ, ರಾಜ್ಯದ 5,000 ಗ್ರಾಮೀಣ ಅರಿವು ಕೇಂದ್ರಗಳಿಗೆ ಬ್ರಿಟಿಷ್ ಕೌನ್ಸಿಲ್ ಡಿಜಿಟಲ್ ಲೈಬ್ರರಿ ಪ್ರಿಮಿಯಂ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಳ್ಳಲು ಅವಕಾಶವನ್ನು ಒದಗಿಸಲಾಗಿದೆ. ಬ್ರಿಟಿಷ್ ಕೌನ್ಸಿಲ್ ನ ಡಿಜಿಟಲ್ ಲೈಬ್ರರಿ ಸಂಪನ್ಮೂಲ ಬಳಕೆಯಿಂದ ಓದುಗರು/ವೀಕ್ಷಕರು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ” ಎಂದು ವಿವರಿಸಿದರು.

“ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ 2019ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಗ್ರಾಮ ಪಂಚಾಯತಿಗಳ ಮೇಲ್ವಿಚಾರಣೆ ಮೂಲಕ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಸಾಧನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ʼಅರಿವು ಕೇಂದ್ರʼಗಳಾಗಿ ಮೇಲ್ದರ್ಜೇಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5,888 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5,767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಬ್ರಿಟಿಷ್ ಕೌನ್ಸಿಲ್ ಕಾರ್ನರ್ಗಾಗಿ ಗುರುತಿಸಲಾದ 10 ಗ್ರಾಮ ಪಂಚಾಯತಿಗಳು

  1. ಬಾಗಲಕೋಟೆ ಜಿಲ್ಲೆ: ಕುಂದರಗಿ ಗ್ರಾ.ಪಂ. ಅರಿವು ಕೇಂದ್ರ, ಬೀಳಗಿ ತಾಲ್ಲೂಕು
  2. ಬೆಳಗಾವಿ ಜಿಲ್ಲೆ: ಬೈಲೂರು ಗ್ರಾ.ಪಂ. ಅರಿವು ಕೇಂದ್ರ, ಕಿತ್ತೂರು ತಾಲ್ಲೂಕು
  3. ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕನ್ನಮಂಗಲ, ಗ್ರಾ.ಪಂ. ಅರಿವು ಕೇಂದ್ರ ದೇವನಹಳ್ಳಿ ತಾಲ್ಲೂಕು
  4. ಚಿಕ್ಕಬಳ್ಳಾಪುರ ಜಿಲ್ಲೆ: ವಟದ ಹೊಸಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ಗೌರಿಬಿದನೂರು ತಾಲ್ಲೂಕು
  5. ಗದಗ ಜಿಲ್ಲೆ: ಡೋಣಿ ಗ್ರಾ.ಪಂ. ಅರಿವು ಕೇಂದ್ರ, ಮುಂಡರಗಿ ತಾಲ್ಲೂಕು
  6. ಕಲಬುರಗಿ ಜಿಲ್ಲೆ: ನಾಲವಾರ ಗ್ರಾ.ಪಂ. ಅರಿವು ಕೇಂದ್ರ ಚಿತ್ತಾಪುರ ತಾಲ್ಲೂಕು
  7. ಮಂಡ್ಯ ಜಿಲ್ಲೆ: ಉಮ್ಮಡಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ಮಂಡ್ಯ ತಾಲ್ಲೂಕು
  8. ರಾಯಚೂರು ಜಿಲ್ಲೆ: ಕಲ್ಲೂರು ಗ್ರಾ.ಪಂ. ಅರಿವು ಕೇಂದ್ರ, ಸಿರವಾರ ತಾಲ್ಲೂಕು
  9. ರಾಮನಗರ ಜಿಲ್ಲೆ: ನೀಲಸಂದ್ರ ಗ್ರಾ.ಪಂ. ಅರಿವು ಕೇಂದ್ರ, ಚನ್ನಪಟ್ಟಣ ತಾಲ್ಲೂಕು
  10. ವಿಜಯಪುರ ಜಿಲ್ಲೆ: ತೊರವಿ ಗ್ರಾ.ಪಂ. ಅರಿವು ಕೇಂದ್ರ, ತಿಕೋಟ ತಾಲ್ಲೂಕು

ರಾಜ್ಯದ ಆಯ್ದ 10 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಕಾರ್ನರ್ ಸ್ಥಾಪನೆಗೆ ಹಾಗೂ ಬ್ರಿಟಿಷ್ ಕೌನ್ಸಿಲ್ ಬೆಂಬಲಕ್ಕೆ ಚಾಲನೆ ನೀಡಲಾದ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ಅಂಜುಂ ಪರವೇಜ್‌, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು. ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯ ಜನಕ ಪುಷ್ಪನಾಥನ್, ಮೇಘಾ ಕಕ್ಕರ್, ಅನಿತಾ ಶಿವಕುಮಾರ್ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X