- ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ಸಾಂದೀಪಿನಿ ಶಿಷ್ಯ ವೇತನ
- ಶಿಷ್ಯ ವೇತನ, ಸ್ವಾವಲಂಬಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜ. 31 ಕೊನೆ ದಿನ
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20ರಷ್ಟು ಹಣವನ್ನು ಸರ್ಕಾರ ಸ್ವಾವಲಂಬಿ ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ ಎಂದು ತಿಳಿಸಿದರು.
ಬ್ರಾಹ್ಮಣ ಸಮುದಾಯದ ಬಡ ಕುಟುಂಬದ ಮಕ್ಕಳಿಗಾಗಿ ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ಸಾಂದೀಪನಿ ಶಿಷ್ಯವೇತನ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕಾಗಿ ವಿನಂತಿ.
The Sandipani Scholarship, offered by the Brahmin Development Corporation, is intended for children from economically… pic.twitter.com/qF1LZcpASO
— Krishna Byre Gowda (@krishnabgowda) January 23, 2024
“ಗರಿಷ್ಠ 5 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅರ್ಹರು ಇದರ ಉಪಯೋಗ ಪಡೆದುಕೊಳ್ಳಿ” ಎಂದು ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಸಾಂದೀಪಿನಿ ಶಿಷ್ಯ ವೇತನ:
ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ ‘ಸಾಂದೀಪಿನಿ’ ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.
ಯುಜಿ-ಪಿಜಿ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ.31 ಕೊನೆಯ ದಿನವಾಗಿರಲಿದೆ ಎಂದು ಅವರು ತಿಳಿಸಿದರು.