ಸೆಮಿಕಂಡಕ್ಟರ್ ಉದ್ಯಮ | ಎಚ್‌ ಡಿ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಎಂ ಬಿ ಪಾಟೀಲ್

Date:

ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

- Advertisement -

ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕಾದ ಮೈಕ್ರಾನ್ ಕಂಪನಿಗೆ ಕೇಂದ್ರ ಸರಕಾರವು ಶೇ.50ರಷ್ಟು ಸಬ್ಸಿಡಿ ಕೊಟ್ಟಿದೆ. ಇದರ ಜತೆಗೆ ಗುಜರಾತ್ ಸರ್ಕಾರ ಶೇ.20ರಷ್ಟು ಸಬ್ಸಿಡಿ ಕೊಟ್ಟಿದೆ. ಈ ರೀತಿ ಕರ್ನಾಟಕ ಸರ್ಕಾರ ಸಬ್ಸಿಡಿ ಕೊಡಲು ಸಿದ್ಧ ಇದಿಯಾ ಎಂದು ಕುಮಾರಸ್ವಾಮಿ ಮಂಗಳವಾರ ಕೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದಕ್ಕೆ ‘ಎಕ್ಸ್’ ಜಾಲತಾಣದಲ್ಲಿ ಪ್ರತಿಕ್ರಿಯೆ‌ ಹಂಚಿಕೊಂಡಿರುವ ಸಚಿವ ಪಾಟೀಲ ಅವರು ‘ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ. ನಂತರ ರಾಜ್ಯದ ಪಾಲಿನ ಶೇ 20ರಷ್ಟು ಸಬ್ಸಿಡಿ ನೀಡುತ್ತೇವೆ. ಈ ಭರವಸೆಯಿಂದ‌ ಕುಮಾರಸ್ವಾಮಿ ಹಿಂದೆ‌ ಸರಿಯುವುದಿಲ್ಲ ಎನ್ನುವ ವಿಶ್ವಾಸ ಕೂಡ ಇದೆ‌’ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಉದ್ದಿಮೆ ಇರಲಿ, ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಸಮಾನ ನೀತಿ ಅನುಸರಿಸಬೇಕು ಎನ್ನುವುದು ಕರ್ನಾಟಕದ ಪ್ರತಿಪಾದನೆಯಾಗಿದೆ. ಇದು ಸಹಜನ್ಯಾಯದ ತತ್ವವಾಗಿದ್ದು, ಇದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್ ಪರ ಧೋರಣೆ ತೋರಿಸುತ್ತಿದೆ. ನಾವು ಇದನ್ನಷ್ಟೇ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...