ಸಂದೇಶ್‌ಖಾಲಿ ಪ್ರಕರಣ | ಸಿಬಿಐ ತನಿಖೆಗೆ ಹಸ್ತಾಂತರಿಸಲು ಕಲ್ಕತ್ತಾ ಹೈಕೋರ್ಟ್ ಆದೇಶ

Date:

ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್‌ ಅದೇಶಿಸಿದೆ. ಬಂಧಿತ ಷಹಜಹಾನ್‌ ಅವರನ್ನು ಸಂಜೆ 4:30ರೊಳಗೆ ಸಿಬಿಐ ಕಸ್ಟಡಿಗೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

- Advertisement -

ಇಡಿ ಅಧಿಕಾರಿಗಳ ಮೇಲಿನ ದಾಳಿ ಕುರಿತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನೊಳಗೊಂಡ ವಿಭಾಗೀಯ ಪೀಠವು ವಿಚಾರಣೆ ನಡೆಸಿದೆ. ಷಹಜಹಾನ್ ವಿರುದ್ಧ ದಾಖಲಾಗಿರುವ ನಝತ್ ಪೊಲೀಸ್ ಠಾಣೆಯಲ್ಲಿನ ಎಫ್‌ಐಆರ್ ಸಂಖ್ಯೆ 8 ಮತ್ತು 9 ಹಾಗೂ ಬಂಗಾವ್ ಪೊಲೀಸ್ ಠಾಣೆಯಲ್ಲಿನ ಎಫ್‌ಐಆರ್ ಸಂಖ್ಯೆ 18 ಅನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಹಿಂದೆ, ಸಂದೇಶಖಾಲಿ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಹೈಕೋರ್ಟ್ ರಚಿಸಿತ್ತು. ಮಂಗಳವಾರ, ಎಸ್‌ಐಟಿಯನ್ನು ರದ್ದುಗೊಳಿಸಿರುವ ವಿಭಾಗೀಯ ಪೀಠವು ಸಿಬಿಐ ತನಿಖೆಗೆ ಆದೇಶಿಸಿದೆ. ಆದರೆ, ಹೈಕೋರ್ಟ್‌ ಅದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಪಡಿತರ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಜನವರಿ 5ರಂದು ಹೊರಟಿದ್ದ ಇಡಿ ತಂಡದ ಮೇಲೆ ಷಹಜಹಾನ್ ಅವರ ನೂರಾರು ಬೆಂಬಲಿಗರು ದಾಳಿ ಮಾಡಿದ್ದರು. ದಾಳಿಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು. ತಲೆ ಮರೆಸಿಕೊಂಡಿದ್ದ ಷಹಜಹಾನ್, 55 ದಿನಗಳ ಕಾಲ ಪತ್ತೆಯಾಗಿರಲಿಲ್ಲ.

ಅಧಿಕಾರಿಗಳ ಮೇಲಿನ ದಾಳಿಯ ನಂತರ, ಸಂದೇಶ್‌ಖಾಲಿಯಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಅಲ್ಲಿನ, ಬುಡಕಟ್ಟು ಸಮುದಾಯದ ಜನರು ಷಹಜಹಾನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆರೋಪೊ ಷಹಜಹಾನ್ ಮತ್ತು ಆತನ ಸಹಚರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಲವಂತವಾಗಿ ತಮ್ಮ ಭೂಮಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೂವರೆಗೆ, ಷಹಜಹಾನ್ ವಿರುದ್ಧ ಸುಮಾರು 100 ದೂರುಗಳು ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...