ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಸಿದ್ಧ, ಆ. 17ರಿಂದ ಅರ್ಜಿ ಸ್ವೀಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

Date:

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಶುಕ್ರವಾರ ಸುದೀರ್ಘ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಸೇವಾಸಿಂಧು ಸರ್ವರ್‌ಗೆ ಓವರ್ ಲೋಡ್ ಆಗುತ್ತಿದೆ. ಅಪ್‍ಡೇಟ್ ಆದರೂ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ. ಸಂಪುಟ ಸಭೆಯಲ್ಲಿ ಆ್ಯಪ್‍ನ ಸ್ವರೂಪ, ಕಾರ್ಯವಿಧಾನ ಕುರಿತು ಮುಖ್ಯಮಂತ್ರಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡ್ತೇವೆ. ಬಹುತೇಕ ಆಗಸ್ಟ್ 17 ಅಥವಾ 18ರಿಂದ ಅರ್ಜಿ ಸ್ವೀಕಾರಕ್ಕೆ ಚಾಲನೆ ಸಿಗಬಹುದು ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ನಾಡಕಚೇರಿ, ತಹಶೀಲ್ದಾರರ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ಕಟೀಲ್: ಕಾಂಗ್ರೆಸ್‌

ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಒಂದೇ ಸಾರಿ ಓವರ್ ಲೋಡ್ ಆಗುತ್ತಿತ್ತು. ಲಕ್ಷಾಂತರ ಜನ ಅರ್ಜಿ ಹಾಕಿದ್ದರಿಂದ ಓವರ್ ಲೋಡ್ ಆಗಿತ್ತು. ಇದೀಗ ಗೃಹ ಜ್ಯೋತಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸ್ಥಿರವಾಗಿದೆ. ಇಂದು ಒಂದೇ ದಿನ ಗೃಹ ಜ್ಯೋತಿಗೆ ಆರು ಲಕ್ಷ ಮಂದಿ ಅರ್ಜಿ ಹಾಕಿದ್ದಾರೆ. ಅದೇ ರೀತಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಸ್ಥಿರವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಪ್ರಜಾಪ್ರತಿನಿಧಿ ಆಯ್ಕೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗುತ್ತದೆ. ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಅರ್ಜಿ ಸಲ್ಲಿಕೆಗೆ ಕಾಲಮಿತಿಯಿಲ್ಲ. ಆದುದರಿಂದ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ....