ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

  • ನಕಲಿ ಎಸ್‌ಟಿ ಜಾತಿ ಪ್ರಮಾಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
  • ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ; ಸಿಎಂ ಸಿದ್ದರಾಮಯ್ಯ ಅಭಯ

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಬಜೆಟ್ ಅಧಿವೇಶನ ಮುಗಿದ ನಂತರ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು, ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

“ಹಿಂದಿನ ಸರ್ಕಾರ ಮೀಸಲಾತಿ ಕುರಿತು ಆತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ ಶೇ. 4 ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ. 2 ರಷ್ಟು ಮೀಸಲಾತಿ ನೀಡಿದೆ. 2 ಸಿ, 2 ಡಿ ಸಹ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಕಲಿ ಜಾತಿ ಪ್ರಮಾಣ ಪತ್ರಕ್ಕೆ ಕಡಿವಾಣ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಮಾಣಪತ್ರ ವಿತರಣೆಯಾಗುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಸಿ.ಆರ್.ಇ ಸೆಲ್ ನಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ಬಿಜಾಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರರ ಸಮುದಾಯಗಳನ್ನು ಎಸ್‌ಟಿಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾರರನ್ನು ಮಾತ್ರ ಎಸ್‌ಟಿಗೆ ಸೇರಿಸಲಾಗಿದ್ದು, ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ.

ಈ ಸುದ್ದಿ ಓದಿದ್ದೀರಾ? ಜು. 15ರ ಒಳಗೆ ಬಾಕಿ ಬಿಲ್‌ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ ಎಚ್ಚರಿಕೆ

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮೀಸಲಾತಿಯನ್ನು ಸಂವಿಧಾನದ 9ನೇ ಪರಿಚ್ಛೇಧಕ್ಕೆ ಸೇರಿಸಲು ನಮ್ಮ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರ್ಕಾರ ಸೃಷ್ಟಿಸಿದ ಎಲ್ಲ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಸಹಕಾರ ಸಚಿವ ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ವಾಲ್ಮೀಕಿ ಸಮುದಾಯದ 14 ಶಾಸಕರು, ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...