ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕ

Date:

Advertisements

‘ಸ್ವಚ್ಛವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆ ಆರಂಭಿಸಲಾಗಿದೆ. ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ʼಸ್ವಚ್ಛ ವಾಹಿನಿʼ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 3469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು.ಸಭೆಯಲ್ಲಿ ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X