ನೇಮಕಾತಿ ಪ್ರಕ್ರಿಯೆಗಾಗಿ ಕೆಇಎನಲ್ಲಿ ಪ್ರತ್ಯೇಕ ಸರ್ವರ್: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

Date:

Advertisements

“ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪ್ರವೇಶ ಮತ್ತು ನೇಮಕಾತಿ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುವ ಕಾರಣ ಸರ್ವರ್‌ ಮೇಲೆ ಒತ್ತಡ ಹೆಚ್ಚಿದೆ. ಹೀಗಾಗಿ ಪ್ರತ್ಯೇಕವಾದಂತಹ ಸರ್ವರ್‌ ಹೊಂದುವ ಬಗ್ಗೆಯೂ ಚಿಂತನೆ ನಡೆದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳ ಪ್ರತ್ಯೇಕ ವಿಭಾಗಗಳನ್ನು ತೆರೆಯುವ ಉದ್ದೇಶವೂ ಇದೆ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಪರೀಕ್ಷಾ ಪಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಶಿಲಾನ್ಯಾಸ ಮಾಡಿದರು. ಇದೇ ಸಂದರ್ಭದಲ್ಲಿ ಅವರು ಕೆಸೆಟ್‌-24 ಪರೀಕ್ಷೆಯಲ್ಲಿ ಅರ್ಹರಾದವರಿಗೆ ಸಾಂಕೇತಿಕವಾಗಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, “ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಉಪಕ್ರಮಗಳನ್ನು ಅಳವಡಿಸುವ ಮೂಲಕ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು. ಗ್ರಾಮೀಣ ಭಾಗದವರು ಸೈಬರ್‌ ಕೇಂದ್ರಗಳಿಗೆ ಹೋಗದೇ ಮೊಬೈಲ್‌ ಮೂಲಕವೇ ಸಿಇಟಿ ಅರ್ಜಿ ಭರ್ತಿ ಮಾಡುವ ಹಾಗೆ ಮಾಡಲಾಗುವುದು. ಅಕ್ರಮಗಳಿಗೂ ಅವಕಾಶ ಇಲ್ಲದಂತೆ ಭದ್ರತಾ ಕ್ರಮಗಳನ್ನೂ ಸೇರಿಸಲಾಗುವುದು. ಸದ್ಯದಲ್ಲೇ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗುವುದು” ಎಂದು ಹೇಳಿದರು.

Advertisements

ಇದೇ ಸಂದರ್ಭದಲ್ಲಿ ಸಚಿವರು ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಮಾತ್ರ ನೋಂದಣಿ ಮಾಡುವ ವ್ಯವಸ್ಥೆಯ ಪೋರ್ಟಲ್‌ಗೂ ಚಾಲನೆ ನೀಡಿದರು. ಒಮ್ಮೆ ನೋಂದಣಿ ಮಾಡಿದವರು ವಿವಿಧ ರೀತಿಯ ನೇಮಕಾತಿ ಪರೀಕ್ಷೆಗಳಿಗೆ ಪದೇ ಪದೇ ಅರ್ಜಿ ಭರ್ತಿ ಮಾಡುವ ಅಗತ್ಯ ಇರುವುದಿಲ್ಲ. ನಿರ್ದಿಷ್ಟ ಸಂಖ್ಯೆಯನ್ನು ನಮೂದಿಸುವುದರ ಮೂಲಕ ಪರೀಕ್ಷಾ ಶುಲ್ಕ ಕಟ್ಟಿ ಅರ್ಹತೆಯನ್ನು ಪಡೆಯಬಹುದು. ಇದು ಕೆಇಎ ಮಾಡಿರುವ ವಿನೂತನ ಕ್ರಮ ಎಂದು ಸಚಿವರು ವಿವರಿಸಿದರು.

ಕಂಪ್ಯೂಟರ್‌ ಆಧಾರಿತ ಪರೀಕ್ಷೆ

ನೇಮಕಾತಿ ಪರೀಕ್ಷೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಈಗಾಗಲೇ ಕೆಪಿಎಸ್‌ಸಿ, ರಾಜೀವ್‌ ಗಾಂಧಿ ಆರೋಗ್ಯ ವಿವಿ ಸೇರಿದಂತೆ ಇತರ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗಿದೆ. ಸದ್ಯಕ್ಕೆ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳಿರುವ ಪರೀಕ್ಷೆಗಳನ್ನು ಈ ರೀತಿ ಮಾಡಿ, ನಂತರದ ದಿನಗಳಲ್ಲಿ ಎಲ್ಲ ಪರೀಕ್ಷೆಗಳಿಗೂ ವಿಸ್ತರಿಸುವ ಉದ್ದೇಶ ಇದೆ ಎಂದು ಹೇಳಿದರು.

ಸಿಇಟಿ ಕೈಪಿಡಿ ಬಿಡುಗಡೆ

2025ನೇ ಸಾಲಿನ ಸಿಇಟಿ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುವ “ಸಿಇಟಿ ದಿಕ್ಸೂಚಿʼ ಕೈಪಿಡಿಯನ್ನೂ ಸಚಿವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಹನ್ನೆರಡು ಪುಟಗಳ ಕೈಪಿಡಿಯನ್ನು ಸರ್ಕಾರಿ, ಅನುದಾನಿತ, ನವೋದಯ ಮತ್ತು ಕೇಂದ್ರೀಯ ವಿದ್ಯಾಲಯಗಳ ಪಿಯುಸಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದರು.

30 ಕೋಟಿ ರೂ ವೆಚ್ಚದಲ್ಲಿ ಕಟ್ಟಡ

ಮಲ್ಲೇಶ್ವರದಲ್ಲಿನ ಕೆಇಎ ಹಾಲಿ ಕಟ್ಟಡಕ್ಕೆ ಹೊಂದಿಕೊಂಡೇ ಹೆಚ್ಚುವರಿಯಾಗಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಕೆಇಎ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ ನಡೆಸುವುದಲ್ಲದೆ, ನೇಮಕಾತಿ ಪರೀಕ್ಷೆಗಳನ್ನೂ ಮಾಡುತ್ತಿದೆ. 2024ನೇ ಸಾಲಿನಲ್ಲಿ ದಾಖಲೆಯ 17 ನೇಮಕಾತಿ ಪರೀಕ್ಷೆಗಳನ್ನು ನಡೆಸಿ 6,052 ಮಂದಿಯ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಹೀಗಾಗಿ ಹೆಚ್ಚುವರಿ ಕಟ್ಟಡದ ಅಗತ್ಯ ಇದೆ. ಹಾಗೆಯೇ ಕೆಇಎ ಸಿಬ್ಬಂದಿ ಒಂದು ವರ್ಷದಲ್ಲಿ ದಾಖಲೆ ಸಂಖ್ಯೆಯ 17 ನೇಮಕಾತಿ ಪರೀಕ್ಷೆ ಮತ್ತು ಒಟ್ಟು 29.28 ಲಕ್ಷ ಅರ್ಜಿಗಳ ನಿರ್ವಹಣೆ ಮಾಡುವುದರ ಮೂಲಕ ಜನ ಮೆಚ್ಚುವ ಕೆಲಸ ಮಾಡಿದ್ದಾರೆ ಎಂದು ಸಚಿವರು ಶ್ಲಾಘಿಸಿದರು.‌

ಇದನ್ನು ಓದಿದ್ದೀರಾ? ಹಸುವಿನ ಹರಿದ ಕೆಚ್ಚಲಿನಿಂದ ದ್ವೇಷದ ವಿಷ ಹಿಂಡಲು ಹೊರಟವರು…

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ, ಶಾಸಕ ಶಿವಲಿಂಗೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಜೆ.ಗದ್ಯಾಳ, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸ ಗೌಡ, ವಿಶ್ರಾಂತ ಕುಲಪತಿ ಪ್ರೊ ತಿಮ್ಮೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X