ಫೆ.12ರಿಂದ ವಿಧಾನಮಂಡಲ ಅಧಿವೇಶನ: 16ರಂದು ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

Date:

ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್​ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಮಂಡಲದ ಅಧಿವೇಶನದ ಮೊದಲ ದಿನವಾದ ಫೆ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ.

ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿ ಸಿಎಂ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್, ಸಾರ್ವಜನಿಕ ವಲಯದಲ್ಲಿ​ ತೀವ್ರ ಕುತೂಹಲ ಮೂಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ರೈಲ್ವೆ ಪ್ರಯಾಣಿಕನಿಗೆ ಮನಬಂದಂತೆ ಹಲ್ಲೆಗೈದ ಟಿಟಿಇ: ವಿಡಿಯೋ ವೈರಲ್

ಹಣಕಾಸು ಖಾತೆಯನ್ನೂ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, 2024 -25ನೇ ಸಾಲಿನ ಬಜೆಟ್‌ ಮಂಡನೆಗೆ ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಜನರಲ್ಲಿ ಹೊಸ ಭರವಸೆ ಮೂಡಿಸುವ, ನಿರೀಕ್ಷೆಗೆ ಸ್ಪಂದಿಸುವ ಗಂಭೀರ ಸವಾಲು ಎದುರಾಗಿದೆ. ಬಜೆಟ್ ಮಂಡನೆಯಲ್ಲಿ ಅನುಭವಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಜೆಟ್, ದಾಖಲೆಯ 15ನೇ ಬಜೆಟ್‌ ಆಗಲಿದೆ. 2023ರ ಜುಲೈ 7ರಂದು ಸಿದ್ದರಾಮಯ್ಯ, ತಮ್ಮ 14ನೇ ಬಜೆಟ್ ಮಂಡಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...

ಪಾಕಿಸ್ತಾನ ಜಿಂದಾಬಾದ್ | ಸದನದಲ್ಲಿ ಬಿಜೆಪಿ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ‌ ಎನ್ನಲಾಗಿರುವ ಪ್ರಕರಣವನ್ನು ರಾಜಕೀಯವಾಗಿ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ...