ರಾಜ್ಯದಲ್ಲಿ ಏಳು ಹೊಸ ಕೃಷಿ ತರಬೇತಿ ಕೇಂದ್ರ ಆರಂಭ: ಸಚಿವ ಚಲುವರಾಯಸ್ವಾಮಿ

Date:

ರಾಜ್ಯದಲ್ಲಿ ಈ ವರ್ಷ ಏಳು ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

- Advertisement -

ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, “ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೃಷಿ ಹೊಸ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು.

“ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆ ಅಳವಡಿಸಿಕೊಳ್ಳಿ. ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸಿ” ಎಂದು ನಿರ್ದೇಶನ ನೀಡಿದರು.

ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ

“ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸಿ. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸಮಾಡಿ” ಎಂದು ಸಚಿವರು ಸೂಚಿಸಿದರು.

“ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ” ಎಂದು ನಿರ್ದೇಶನ‌ ನೀಡದರು.

“ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೊಂದಣಿ ಜಾಸ್ತಿ ‌ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ. ಹೈಟೆಕ್ ಹಾರ್ವೆಸ್ಟ್‌ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ” ಎಂದರು.

ಕೃಷಿ ಆಯುಕ್ತ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ  ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ ಡಾ ಜಿ ಟಿ ಪುತ್ರ ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...