ಪ್ರಜಲ್ ಲೈಂಗಿಕ ದೌರ್ಜನ್ಯ ಪ್ರಕರಣ | ಎಚ್ ಡಿ ರೇವಣ್ಣಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ

Date:

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಲು ನ್ಯಾಯಾಲಯವು ನಿರಾಕರಿಸಿದೆ.

- Advertisement -

ಜಾಮೀನು ನಿರಾಕರಣೆಯ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಸಂಜೆಯೇ ಎಚ್ ಡಿ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಅರ್ಜಿಯನ್ನು ಮುಂದೂಡಿದ್ದಾರೆ.

“ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ” ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ ಈ ಮನವಿಯನ್ನು ಪುರಸ್ಕರಿಸದ ನ್ಯಾಯಾಲಯವು, ಜಾಮೀನು ನೀಡಲು ನಿರಾಕರಿಸಿದೆ.

ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಹಾಗೂ ವಿಶೇಷ ತನಿಖಾ ತಂಡದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದ ಮಂಡನೆ ಮಾಡಿದ್ದರು.

ಸುಮಾರು ಒಂದೂವರೆ ತಾಸು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿ, ಸುಮಾರು ಎರಡು ತಾಸುಗಳ ಬಳಿಕ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...