ಮನೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಶುಕ್ರವಾರ) ಮುಂದೂಡಿದೆ.
ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮೂಲಕ ಮಧ್ಯಾಹ್ನ ಹೆಚ್.ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, “ಎಫ್‌ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲಾ?” ಎಂದು ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಅವರಲ್ಲಿ ಕೋರ್ಟ್ ಪ್ರಶ್ನೆ ಮಾಡಿತು.
ಬಳಿಕ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯವು, ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಿದೆ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇದನ್ನು ಓದಿದ್ದೀರಾ? ದೇವೇಗೌಡರ ಕುಟುಂಬವನ್ನು ‘420’ ಎನ್ನಲ್ಲ; ಪೆನ್‌ಡ್ರೈವ್ ಈ ಕುಟುಂಬದ ಆಸ್ತಿ: ಡಿ ಕೆ ಸುರೇಶ್ ವ್ಯಂಗ್ಯ
ಮಧ್ಯಂತರ ಜಾಮೀನು ನೀಡಲು ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿ ಮಾಡಿದ್ದಾರೆ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶದಲ್ಲಿ ತಿಳಿಸಿದ್ದಾರೆ. ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆಯು ದೂರು ನೀಡಿದ್ದರು.
